ಧಾರವಾಡ: ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭ ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಕರ್ನಾಟಕದ ವಿದ್ಯಾವರ್ಧಕ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸರ್ಕಾರಿ ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ ಹಾಗೂ ದ್ವಿಭಾಷಾ ಕಲಿಕೆಗೆ ಸಂಬಂಧಿಸಿದಂತೆ ಬುಧವಾರ ನಡೆದ ಸಭೆಯಲ್ಲಿ ನಾಲ್ಕು ನಿರ್ಣಯ ಕೈಗೊಳ್ಳಲಾಯಿತು.

ಸಿಬಿಎಸ್ಇ ಶಾಲೆಗಳಲ್ಲಿ ಮೊದಲ ಹಂತದ ಎಂಟು ವರ್ಷದವರೆಗೆ ಮಾತೃಭಾಷೆ ಅಥವಾ ರಾಜ್ಯ ಭಾಷೆಯಲ್ಲಿ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಕ್ರಮವಹಿಸಿದಂತೆ ರಾಜ್ಯ ಸರ್ಕಾರವೂ ಕ್ರಮ ವಹಿಸಬೇಕು. ಕನ್ನಡ ಭಾಷೆ ವಿಷಯದಲ್ಲಿ 125 ಅಂಕ ಬದಲಿಗೆ 100 ಅಂಕ ನಿಗದಿಪಡಿಸುವ ಪ್ರಸ್ತಾವ ಕೈಬಿಡಬೇಕೆಂದು ಒತ್ತಾಯಿಸಲು ನಿರ್ಣಯಿಸಲಾಯಿತು.

ಮಾತೃಭಾಷೆ ಶಿಕ್ಷಣದ ಮಹತ್ವ ಕುರಿತು ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ವಿಚಾರ ಸಂಕಿರಣ ಆಯೋಜಿಸಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಿ, ತಜ್ಞರ ಅಭಿಪ್ರಾಯಗಳೊಂದಿಗೆ ರಾಜ್ಯ ಸರ್ಕಾರಕ್ಕೆ ಆಗ್ರಹ ಪಡಿಸಲು ತೀರ್ಮಾನಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಪ್ರೊ. ಮಾಲತಿ ಪಟ್ಟಣಶೆಟ್ಟಿ, ವೆಂಕಟೇಶ ಮಾಚಕನೂರ, ಶಿವಶಂಕರ ಹಿರೇಮಠ, ಡಿ.ಎಂ. ಹಿರೇಮಠ, ಪ್ರೊ. ವೀರಣ್ಣ ರಾಜೂರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.