ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ. ರಾಜಶೇಖರ ಮನಸೂರ ನಿಧನ

Last Updated 2 ಮೇ 2022, 2:55 IST
ಅಕ್ಷರ ಗಾತ್ರ

ಧಾರವಾಡ: ಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ. ರಾಜಶೇಖರ ಮನಸೂರ (79) ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾದರು.

ಅವರಿಗೆ ಪತ್ನಿ ಹಾಗೂ ಮೂವರು ಪುತ್ರಿಯರು ಇದ್ದಾರೆ. ಪಂ. ಮಲ್ಲಿಕಾರ್ಜುನ ಮನಸೂರ ಅವರ ಪುತ್ರ ಡಾ. ರಾಜಶೇಖರ ಮನಸೂರ ಅವರು ಜೈಪುರ ಅತ್ರೌಲಿ ಘರಾಣೆಸಂಗೀತದ ಮೇರು ಗಾಯಕರಾಗಿದ್ದರು. ಇಂಗ್ಲೆಂ
ಡ್‌ನಲ್ಲಿ ಶಿಕ್ಷಣ ಪೂರೈಸಿ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್‌ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು.

ಆಲ್‌ ಇಂಡಿಯಾ ರೇಡಿಯೊದ ಉನ್ನತ ಶ್ರೇಣಿಯ ಕಲಾವಿದರಾಗಿದ್ದ ಇವರು ಬಹಳಷ್ಟು ಪ್ರಮುಖ ವೇದಿಕೆಯಲ್ಲಿ ಕಛೇರಿ ನೀಡಿದ್ದಾರೆ. ಇವರ ಗಾಯನದ ಧ್ವನಿಮುದ್ರಿಕೆಗಳನ್ನು ಭೋಪಾಲ್‌ನಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಮನುಕುಲ ಸಂಗ್ರಹಾಲಯದಲ್ಲಿ ಸಂಗ್ರಹಿಸಿಡಲಾಗಿದೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಗಳು ಸಂದಿವೆ. ಸಂಜೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT