ಶನಿವಾರ, ಜನವರಿ 22, 2022
16 °C

ನಿಧನ ವಾರ್ತೆ: ದುಂಡಮ್ಮ ತೇಗೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಳ್ನಾವರ: ಇಲ್ಲಿನ ಅರ್ಬನ್ ಬ್ಯಾಂಕಿನ ನಿರ್ದೇಶಕಿ ದುಂಡಮ್ಮ ತೇಗೂರ ( 83 ) ಭಾನುವಾರ ರಾತ್ರಿ ನಿಧನರಾದರು. ಇವರು ಬ್ಯಾಂಕ್‌ನ ಸಂಸ್ಥಾಪಕ ದಿವಂಗತ ಬಿ.ಬಿ. ತೇಗೂರ ಅವರ ಪತ್ನಿ. ಮೃತರಿಗೆ ಮೂವರು ಪುತ್ರರು ಹಾಗೂ ಐವರು ಪುತ್ರಿಯರು ಇದ್ದಾರೆ.

ದುಂಡಮ್ಮ, ಅಳ್ನಾವರ ಅರ್ಬನ್ ಬ್ಯಾಂಕಿನ್ ಅಧ್ಯಕ್ಷರಾಗಿ ಹಾಗೂ ಸದಸ್ಯರಾಗಿ ಮೂರೂವರೆ ದಶಕ ಸಹಕಾರ ರಂಗದಲ್ಲಿ ತೊಡಗಿಕೊಂಡಿದ್ದರು. ಇಲ್ಲಿನ ಅಕ್ಕ ಮಹಾದೇವಿ ಮಹಿಳಾ ಮಂಡಳದಲ್ಲಿ ಸಕ್ರಿಯರಾಗಿದ್ದರು. ಪ್ರತಿ ವರ್ಷ ಇಲ್ಲಿನ ಭಕ್ತರನ್ನು ಶ್ರೀಕ್ಷೇತ್ರ ಉಳವಿಗೆ ಪಾದಯಾತ್ರೆಗೆ ಕರೆದುಕೊಂಡು ಹೋಗುತ್ತಿದ್ದರು.

ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಮುರಗೋಡದ ನೀಲಕಂಠ ಸ್ವಾಮೀಜಿ, ಶಾಸಕರಾದ ಸಿ.ಎಂ. ನಿಂಬಣ್ಣವರ, ಅಮೃತ ದೇಸಾಯಿ, ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ, ತಹಶೀಲ್ದಾರ್ ಅಮರೇಶ ಪಮ್ಮಾರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ಎಂ.ಸಿ. ಹಿರೇಮಠ, ವೀರಶೈವ ಸಮಾಜದ ಅಧ್ಯಕ್ಷ ಎಸ್.ಬಿ. ಪಾಟೀಲ, ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಮಂಗಳಾ ರವಳಪ್ಪನವರ, ಪಟ್ಟಣ ಪಂಚಾಯ್ತಿ ಉಪಾಧ್ಯಕ್ಷ ನದೀಮ ಕಂಟ್ರ್ಯಾಕ್ಟರ್ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು