ಭಾನುವಾರ, ಜೂನ್ 26, 2022
21 °C

ಹುಬ್ಬಳ್ಳಿ-ಧಾರವಾಡ ಪಾಲಿಕೆಗೆ ಈರೇಶ ಅಂಚಟಗೇರಿ ಮೇಯರ್, ಉಮಾ ಮುಕುಂದ ಉಪಮೇಯರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 21ನೇ ಅವಧಿಗೆ ಈರೇಶ ಅಂಚಟಗೇರಿ ಮೇಯರ್, ಉಮಾ ಮುಕುಂದ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಪಾಲಿಕೆ ಸಭಾಭವನದಲ್ಲಿ ಶನಿವಾರ ನಡೆದ ಚುನಾವಣೆಯಲ್ಲಿ ಚುನಾವಣಾಧಿಕಾರಿಯಾದ ಬೆಳಗಾವಿಯ ಪ್ರಾದೇಶಿಕ ಆಯುಕ್ತ ಆಮ್ಲನ್ ಬಿಸ್ವಾಸ್ ಮೇಯರ್, ಉಪಮೇಯರ್ ಹೆಸರು ಘೋಷಣೆ ಮಾಡಿದರು.

ಬಿಜೆಪಿ, ಕಾಂಗ್ರೆಸ್ ಮತ್ತು ಎಎಐಎಂಐಎಂ ಪಕ್ಷದಿಂದ ತಲಾ ಇಬ್ಬರು ಮೇಯರ್, ಉಪಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕೈ ಎತ್ತುವ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬಿಜೆಪಿಯ ಈರೇಶ ಅಂಚಟಗೇರಿ(ವಾರ್ಡ್ ನಂ. 2) 50 ಮತ ಪಡೆದು ಮೇಯರ್ ಆಗಿ ಆಯ್ಕೆಯಾದರು. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಮಯೂರ‌ ಮೋರೆ 35 ಮತ ಪಡೆದು, 15 ಮತಗಳ ಅಂತರದಿಂದ‌ ಪರಾಭವಗೊಂಡರು.

ಅದೇ ರೀತಿ ಉಮಾ ಮುಕುಂದ ಅವರು 51 ಮತಗಳನ್ನು ಪಡೆದು ಉಪಮೇಯರ್ ಆಗಿ ಆಯ್ಕೆಯಾದರು. ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ದೀಪಾ ನೀರಲಗಿ 35 ಮತಗಳನ್ನು‌ ಪಡೆದು, 16 ಮತಗಳ ಅಂತರದಿಂದ ಸೋಲು ಅನುಭವಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು