ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಚುನಾವಣಾ ಬಾಂಡ್‌: ಸಮಗ್ರ ತನಿಖೆಗೆ ಒತ್ತಾಯ

Published 24 ಮಾರ್ಚ್ 2024, 14:18 IST
Last Updated 24 ಮಾರ್ಚ್ 2024, 14:18 IST
ಅಕ್ಷರ ಗಾತ್ರ

ಹುಬ್ಬಳ್ಳಿ: ’ಆಡಳಿತರೂಢ ಬಿಜೆಪಿಯು ಚುನಾವಣಾ ಬಾಂಡ್‌ ಪಡೆಯುವ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದು, ಮೇಲ್ನೋಟಕ್ಕೆ ಕಂಡು ಬಂದಿದ್ದು, ಇದರ ಒಟ್ಟು ಪ್ರಕರಣವನ್ನು ಸುಪ್ರೀಂ ಕೋರ್ಟ್‌ ತನ್ನ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಸಿಪಿಐ(ಎಂ) ಧಾರವಾಡ ಜಿಲ್ಲಾ ಸಮಿತಿ ಒತ್ತಾಯಿಸಿದೆ. 

‘ಮೋದಿಯವರು ದೇಶದ ಜನತೆಗೆ ‘ನಾನೂ ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ. ಅಲ್ಲದೇ ಕಪ್ಪು ಹಣವನ್ನು ಬಯಲಿಗೆಳೆಯುತ್ತೇನೆ‘ ಎಂದು ಹೇಳಿಕೊಳ್ಳುತ್ತಾ ಭ್ರಷ್ಟಾಚಾರ ನಡೆಸಿರುವುದು ಚುನಾವಣಾ ಬಾಂಡ್‌ ಹಗರಣ ಸಾಬೀತು ಪಡಿಸುತ್ತದೆ. ಅಧಿಕಾರದ ದುರುಪಯೋಗ, ಭ್ರಷ್ಟಾಚಾರ, ಸ್ವಾಯತ್ತ ಸಂಸ್ಥೆಗಳ ದುರ್ಬಳಕೆ, ಬ್ಲಾಕ್‌ಮೇಲ್‌ ಅಂಶಗಳನ್ನು ಈ ಹಗರಣ ಎತ್ತಿ ತೋರಿಸುತ್ತದೆ. ಚುನಾವಣಾ ಬಾಂಡ್‌ ನೀಡಿದ ಕಂಪನಿಗಳು, ಸಂಸ್ಥೆಗಳು ಲಾಭದಾಯಕ ಗುತ್ತಿಗೆಗಳನ್ನು ಪಡೆದಿರುವುದು ಕಂಡು ಬಂದಿದೆ. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಸಮಿತಿ ಆಗ್ರಹಿಸಿದೆ. 

‘ಬಿಜೆಪಿಯವರು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಈಡೇರಿಸಿಲ್ಲ. ರಾಜ್ಯವು ತೀವ್ರವಾದ ಬರಗಾಲವನ್ನು ಎದುರಿಸುತ್ತಿರುವಾಗ ರಾಜ್ಯದ ಸಂಸದರು ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆ ಬಗ್ಗೆ ಮಾತನಾಡಿಲ್ಲ. ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ನೀಡುವಲ್ಲಿಯೂ ಕೇಂದ್ರದ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸಿದೆ. ಇಂತಹ ಜನವಿರೋಧಿ ಪಕ್ಷಕ್ಕೆ ಮತ್ತೆ ಅವಕಾಶ ನೀಡಬಾರದು‘ ಎಂದು ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಮಹೇಶ ಪತ್ತಾರ ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT