ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಳಿ ನಗರ ಅಭಿವೃದ್ಧಿಗೆ ಒತ್ತು: ಹಾಲಪ್ಪ

Last Updated 5 ಮಾರ್ಚ್ 2022, 12:08 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರಾಜ್ಯದಲ್ಲಿ ಅತಿಹೆಚ್ಚು ವಿದ್ಯಾರ್ಥಿ ನಿಲಯಗಳನ್ನು ಹೊಂದಿರುವ ಜಿಲ್ಲೆಗಳಲ್ಲಿ ಧಾರವಾಡವೂ ಒಂದಾಗಿದೆ. ಇಲ್ಲಿನ ಎಲ್ಲಾ ವಸತಿ ನಿಲಯಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಅವಳಿ ನಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ರಾಜೀವ್ ನಗರದ ರೈಲ್‌ ಗಾರ್ಡನ್ ಹತ್ತಿರ ಸಮಾಜ ಕಲ್ಯಾಣ ಇಲಾಖೆಯು ₹3.75 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಹುಬ್ಬಳ್ಳಿ–ಧಾರವಾಡ ಉತ್ತರ ಕರ್ನಾಟಕದ ಪ್ರಮುಖ ನಗರಗಳಾಗಿವೆ. ಸುಸಜ್ಜಿತ ಸೌಕರ್ಯಗಳಿಂದ ಕೂಡಿದ ಕಟ್ಟಡ ಉದ್ಘಾಟಿಸಿರುವುದು ಸಂತಸ ತಂದಿದೆ. ಸರ್ಕಾರ ನೀಡಿರುವ ಸೌಲಭ್ಯವನ್ನು ವಿದ್ಯಾರ್ಥಿಗಳು ಬಳಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಶಾಸಕ ಜಗದೀಶ ಶೆಟ್ಟರ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಸುರೇಶ ಇಟ್ನಾಳ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಡಾ.ಎನ್.ಆರ್. ಪುರುಷೋತ್ತಮ, ಸಹಾಯಕ ನಿರ್ದೇಶಕಿ ನಂದಾ ಹಣಬರಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT