ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | BVB ಕಾಲೇಜು ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಸಹಪಾಠಿ

Published 18 ಏಪ್ರಿಲ್ 2024, 15:28 IST
Last Updated 18 ಏಪ್ರಿಲ್ 2024, 15:28 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ಸಹಪಾಠಿಯೇ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ಬಿವಿವಿ ಕಾಲೇಜಿನಲ್ಲಿ ಎಂಸಿಎ ವಿಭಾಗದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (25) ಕೊಲೆಯಾದವರು. ವಿಭಾಗದ ಸಹಪಾಠಿ ಫಯಾಜ್‌ (27) ಕೊಲೆ ಆರೋಪಿ. ಆತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

‘ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ. ತನ್ನನ್ನು ಪ್ರೀತಿಸುವಂತೆ ನೇಹಾಗೆ ಫಯಾಜ್ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆಕೆ ನಿರಾಕರಿಸಿದ ಕಾರಣ ಕೋಪಗೊಂಡ ಆತ ಗುರುವಾರ ಸಂಜೆ ಕೃತ್ಯವೆಸಗಿದ. ನೇಹಾ ಮೇಲೆ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿ, ಕುತ್ತಿಗೆಗೆ ಹಲವು ಬಾರಿ ಇರಿದ. ಆಕೆಯನ್ನು ತಕ್ಷಣವೇ ವಿದ್ಯಾರ್ಥಿಗಳು ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಮಾರ್ಗ ಮಧ್ಯೆ ನೇಹಾ ಕೊನೆಯುಸಿರೆಳೆದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಖಂಡಿಸಿ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ರಾತ್ರಿ ಪ್ರತಿಭಟನೆ ನಡೆಸಿ, ಆರೋ‍ಪಿಗೆ ಗಲ್ಲುಶಿಕ್ಷಿ ವಿಧಿಸುವಂತೆ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT