ಹುಬ್ಬಳ್ಳಿ: ಬಿ.ಇ. ಮತ್ತು ಡಿಪ್ಲೊಮಾ ಪದವೀಧರ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಗಳ ಪರವಾನಗಿ ಶುಲ್ಕ ಹೆಚ್ಚಳ ಮಾಡಿರುವ ಮಹಾನಗರ ಪಾಲಿಕೆಯ ಕ್ರಮಕ್ಕೆ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ ಅಸೋಸಿಯೇಷನ್ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ಪಾಲಿಕೆ ಅಧಿಕಾರಿಗಳಿಗೆ ಸೋಮವಾರ ಮನವಿ ಸಲ್ಲಿಸಿದ ಅಸೋಸಿಯೇಷನ್ ಸದಸ್ಯರು, ‘ಈ ಹಿಂದೆ ಬಿ.ಇ. ಎಂಜಿನಿಯರ್ಗಳಿಗೆ ₹1,500 ಹಾಗೂ ಡಿಪ್ಲೊಮಾ ಎಂಜಿನಿಯರ್ಗಳಿಗೆ ₹750 ಪರವಾನಗಿ ಶುಲ್ಕ ಇತ್ತು. ಈಗ ಅದನ್ನು ಕ್ರಮವಾಗಿ ₹12,500 ಮತ್ತು ₹ 9ಸಾವಿರಕ್ಕೆ ಹೆಚ್ಚಿಸಲಾಗಿದೆ. ಈ ಹಿಂದೆ ಇದ್ದ ಶುಲ್ಕ ಮಾದರಿಯನ್ನೇ ಅನುಸರಿಸಬೇಕು’ ಎಂದು ಒತ್ತಾಯಿಸಿದರು.

‘ಪಾಲಿಕೆಯ ನಿಯಮಗಳಲ್ಲಿ ಶುಲ್ಕ ಪರಿಷ್ಕರಣೆಗೆ ಅವಕಾಶ ಇಲ್ಲದಿದ್ದರೂ ಹೆಚ್ಚಳ ಮಾಡಿರುವುದು ಕಾನೂನುಬಾಹಿರ. ಎಂಟು ದಿನಗಳ ಒಳಗೆ ಸ್ಪಂದಿಸದಿದ್ದರೆ ಕಟ್ಟಡ ಪರವಾನಗಿ ಮತ್ತು ಇತರ ಎಂಜಿನಿಯರಿಂಗ್ ಕಾರ್ಯಗಳನ್ನು ಸ್ಥಗಿತಗೊಳಿಸಬೇಕಾಗುತ್ತದೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.