ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಯರ್ ಚುನಾವಣೆ ಏಕೆ ವಿಳಂಬ ಮಾಡಲಾಗುತ್ತಿದೆ ಎಂಬ ಮಾಹಿತಿ ನನಗೂ ಇಲ್ಲ; ಶೆಟ್ಟರ್

Last Updated 18 ಮಾರ್ಚ್ 2022, 10:15 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪ ಮೇಯರ್ ಚುನಾವಣೆ ಬೇಗನೆ ನಡೆಸಬೇಕು. ಯಾವ ಕಾರಣಕ್ಕೆ ವಿಳಂಬ ಮಾಡಲಾಗುತ್ತಿದೆ ಎಂಬ ಮಾಹಿತಿ ನನಗೂ ಇಲ್ಲ ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ಚುನಾವಣೆ ಕೂಡಲೇ ಮಾಡಬೇಕು ಎಂದು ಸಂಬಂಧಿಸಿದ ಸಚಿವರ ಗಮನಕ್ಕೂ ತರುತ್ತೇನೆ ಎಂದರು.

ಮಮ್ಮಿಗಟ್ಟಿಯಲ್ಲಿ ಎಫ್‌ಎಂಜಿಸಿ ಕ್ಲಸ್ಟರ್ ಆರಂಭಕ್ಕೆ 200 ಎಕರೆ ಭೂಮಿ ಕಾಯ್ದಿರಿಸಲಾಗಿದೆ. ಕೆಲವು ರಿಯಾಯ್ತಿಗಳನ್ನು ನೀಡುವುದಕ್ಕೆ ಸಂಬಂಧಿಸಿದ ಫೈಲ್‌ ಆರ್ಥಿಕ ಇಲಾಖೆಯಲ್ಲಿದೆ. ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ಬೇಗನೆ ಕ್ಲಸ್ಟರ್ ಆರಂಭಿಸಬೇಕು ಎಂದು ತಿಳಿಸಿದ್ದೇನೆ ಎಂದರು.

ರಾಷ್ಟ್ರ ಧ್ವಜಗಳಿಗೆ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಪಾಲಿಸ್ಟರ್ ಧ್ವಜ ತಯಾರಿಕೆಗೂ ಕೇಂದ್ರ ಅನುಮತಿ ನೀಡಿರಬೇಕು. ಖಾದಿಗೆ ಪ್ರೋತ್ಸಾಹ ನೀಡಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಪಾಲಿಸ್ಟರ್ ಧ್ವಜಗಳಿಂದ ಖಾದಿ ಧ್ವಜ ತಯಾರಿಕೆಗೆ ತೊಂದರೆಯಾದರೆ ಸಂಸದರು ಹಾಗೂ ಕೇಂದ್ರ ಸರ್ಕಾರದ ಗಮನಕ್ಕೆ ತರುವೆ ಎಂದು ಹೇಳಿದರು.'

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT