ಸೋಮವಾರ, ಮೇ 23, 2022
21 °C

ಧಾರವಾಡ: ವಿನಯ ಕುಲಕರ್ಣಿಗೆ ನ.23ರವರೆಗೆ ನ್ಯಾಯಾಂಗ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ನ.23ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.

2016ರ ಜೂನ್ 15 ರಂದು ನಡೆದಿದ್ದ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ನ.5 ರಂದು ವಿನಯ ಅವರನ್ನು ಬಂಧಿಸಿತ್ತು.

ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಿದ್ದ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಗುರುವಾರ ಆದೇಶಿಸಿತ್ತು. ಅದರಂತೆ ಹುಬ್ಬಳ್ಳಿಯಲ್ಲಿ ವಿನಯ ಕುಲಕರ್ಣಿ ಅವರ ವಿಚಾರಣೆಯನ್ನು ಸಿಬಿಐ ನಡೆಸಿತ್ತು.

ಪೊಲೀಸ್ ಬಂಧನ ಅವಧಿ ಸೋಮವಾರ ಕೊನೆಯಾಗಿದ್ದರಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಕಲಾಪಕ್ಕೆ ವಿನಯ ಅವರನ್ನು ಸಿಬಿಐ ಅಧಿಕಾರಿಗಳು ಹಾಜರು ಪಡಿಸಿದರು.

ಈ ವೇಳೆ ವಿನಯ ಕುಲಕರ್ಣಿ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಅನುಮತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತು. 

ಇದಕ್ಕೆ ವಿನಯ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಹೀಗಾಗಿ ಇದ‌ನ್ನು ನ್ಯಾಯಾಲಯ ಮಾನ್ಯ ಮಾಡಲಿಲ್ಲ. ಅಂತಿಮವಾಗಿ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧ‌ಕ್ಕೆ ಒಪ್ಪಿಸಿ ಆದೇಶಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು