ಸೋಮವಾರ, ಜುಲೈ 26, 2021
21 °C
ಹುಬ್ಬಳ್ಳಿ ತಾಲ್ಲೂಕಿನ ಅದರಗುಂಚಿಯಲ್ಲಿ ಶಿಕ್ಷಕರಿಂದ ಪ್ರಯೋಗ​

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾತ್ಯಕ್ಷಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಭೀತಿಯ ನಡುವೆಯೂ ಸುರಕ್ಷಿತವಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಹುಬ್ಬಳ್ಳಿ ತಾಲ್ಲೂಕಿನ ಅದರಗುಂಚಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರಾತ್ಯಕ್ಷಿಕೆ ನಡೆಯಿತು.

ಕೋವಿಡ್‌ 19ನಿಂದ ಯಾವ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಎಚ್ಚರಿಕೆಯಿಂದ ಇದ್ದರೆ ಸಾಕು. ಧೈರ್ಯವಾಗಿ ಪರೀಕ್ಷಾ ಕೇಂದ್ರಗಳಿಗೆ ಬಂದು ಪರೀಕ್ಷೆ ಬರೆಯಿರಿ ಎಂದು ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿದರು. ಮಕ್ಕಳಲ್ಲಿನ ಭೀತಿ ಹೋಗಲಾಡಿಸಿ ಆತ್ಮವಿಶ್ವಾಸ ತುಂಬಲು ಪರೀಕ್ಷಾ ಪ್ರಾತ್ಯಕ್ಷಿಕೆ ಹಮ್ಮಿಕೊಳ್ಳಲಾಗಿದೆ ಎಂದು ಹುಬ್ಬಳ್ಳಿ ಗ್ರಾಮೀಣ ಬಿಇಒ ಅಶೋಕಕುಮಾರ ಸಿಂದಗಿ ತಿಳಿಸಿದರು.

ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಒಟ್ಟು 13 ಪರೀಕ್ಷಾ ‌ಕೇಂದ್ರಗಳಿದ್ದು, 3,379  ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಪ್ರಾತ್ಯಕ್ಷಿಕೆಯ ವಿಡಿಯೊವನ್ನು ಮಕ್ಕಳ ಪೋಷಕರಿಗೆ ಕಳುಹಿಸಿ ಅವರಲ್ಲೂ ವಿಶ್ವಾಸ ಮೂಡಿಸುವ ಗುರಿ ನಮ್ಮದು ಎಂದು ವಿವರಿಸಿದರು. ಪ್ರಾತ್ಯಕ್ಷಿಕೆಯಲ್ಲಿ ಅದರಗುಂಚಿ ಶಾಲೆಯ 40 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪರೀಕ್ಷಾ ಕೇಂದ್ರಕ್ಕೆ ಬರುವಾಗ ವಿದ್ಯಾರ್ಥಿಗಳಿಗೆ ಎರಡು ಮಾಸ್ಕ್‌, ಸ್ಯಾನಿಟೈಸರ್‌ ನೀಡಲಾಗುತ್ತದೆ. ಕೋವಿಡ್ 19 ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಪೋಷಕರಿಗೆ ಮತ್ತು ಶಿಕ್ಷಕರಿಗೆ ಎಸ್‌ಎಂಎಸ್‌ ಮೂಲಕ ಮಾಹಿತಿ ಕಳುಹಿಸಲಾಗುವುದು ಎಂದು ಹೇಳಿದರು. ಗ್ರಾಮೀಣ ಪ್ರದೇಶ ವ್ಯಾಪ್ತಿಯ ಎಲ್ಲ ಪರೀಕ್ಷೆ ಕೇಂದ್ರಗಳಿಗೆ 12 ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ಶಾಲೆ ಮುಖ್ಯ ಶಿಕ್ಷಕ ಅಶ್ಫಾಕ್‌ ಹಿರೇಕುಂಬಿ, ಶಿಕ್ಷಣ ಸಂಯೋಜಕ ಆರ್‌.ಬಿ. ಪಾಟೀಲ, ಎಂ.ಜೆ. ಜೇಡಿಮಠ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು