ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂದನಕ್ಕೊಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ನ್ಯಾಯಾಂಗ ಬಂಧನವನ್ನು 14 ದಿನಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ವಿಸ್ತರಿಸಿದೆ.

ನ. 5ರಂದು ವಿನಯ ಅವರನ್ನು ಸಿಬಿಐ ಬಂದಿಸಿತ್ತು. ನಂತರ ಮೂರು ದಿನಗಳ ಕಾಲ ತನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ತದನಂತರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಒಪ್ಪಿಸಿತ್ತು. ಹೀಗಾಗಿ ಹಿಂಡಲಾಗ ಜೈಲಿನಲ್ಲಿ ಇವರನ್ನು ಇರಿಸಲಾಗಿತ್ತು.

ಬಂಧನ ಅವಧಿ ಸೋಮವಾರ ಮುಗಿದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಲಯಕ್ಕೆ ವಿನಯ ಕುಲಕರ್ಣಿ ಅವರನ್ನು ಹಾಜರುಪಡಿಸಲಾಯಿತು.

ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಚಾಕ್ಷರಿ ಬಂಧನ ಅವಧಿ ಡಿ. 7ರವರೆಗೆ ವಿಸ್ತರಿಸಿ ಆದೇಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.