ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಕೊಳ: ಜಾತ್ರಾ ಮಹೋತ್ಸವ

Last Updated 8 ಮೇ 2022, 2:36 IST
ಅಕ್ಷರ ಗಾತ್ರ

ನವಲಗುಂದ: ತಾಲ್ಲೂಕಿನ ಶಿರಕೊಳ ಗ್ರಾಮದ ಗ್ರಾಮ ದೇವತೆ ದ್ಯಾಮಮ್ಮ ಹಾಗೂ ದುರ್ಗಮ್ಮ ದೇವತೆಗಳ ಮೂರ್ತಿ ಪುನರ್ ಪ್ರತಿಷ್ಠಾಪನೆ ಹಾಗೂ ಜಾತ್ರಾ ಮಹೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ 9ರಿಂದ 13ರ ವರೆಗೆ ನಡೆಯಲಿವೆ.

ಶಿರಕೋಳ ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿದ್ಧಾರೂಢ ಆಶ್ರಮ ಶಿರಕೋಳದ ಚಿದಾನಂದ ಸ್ವಾಮೀಜಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. 9ರಂದು ಬೆಳಿಗ್ಗೆ 8ಕ್ಕೆ ಗ್ರಾಮದೇವತೆಯರ ಮೂರ್ತಿಗಳು ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮುಖಾಂತರ ಬರಮಾಡಿಕೊಳ್ಳಲಾಗುವುದು. ಸಂಜೆ 6ಕ್ಕೆ ಬಾಳೆಹೊನ್ನೂರಿನ ರಂಭಾಪುರಿ ಮಠದ ವೀರಸೋಮೇಶ್ವರ ಸ್ವಾಮೀಜಿ ಆಶೀರ್ವವಚನ ನೀಡಲಿದ್ದಾರೆ. 13ರಂದು ಬೆಳಿಗ್ಗೆ 8ಕ್ಕೆ ಪ್ರಾಣ ಪ್ರತಿಷ್ಠಾಪನೆ, ಚಂಡಿಕಾ ಹೋಮ, ಉಡಿತುಂಬುವ ಕಾರ್ಯಕ್ರಮ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT