ಶುಕ್ರವಾರ, ಏಪ್ರಿಲ್ 10, 2020
19 °C

ಖೊಟ್ಟಿ ದಾಖಲೆ ನೀಡಿ ಪ್ರಮಾಣ ಪತ್ರ, ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಖೊಟ್ಟಿ ದಾಖಲೆಗಳನ್ನು ನೀಡಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದ ಬೈರಿದೇವರಕೊಪ್ಪದ ರೇಣುಕಾ ಕಾಲೊನಿ ನಿವಾಸಿ ಶಿವಾಜಿ ಅತ್ತರವಾಲೆ ವಿರುದ್ಧ ಉಪನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ರಜಪೂರ 2ಎ ವರ್ಗದ ಜಾತಿಗೆ ಸೇರಿದ್ದ ಇವನು, ಹೆಚ್ಚಿನ ಮೀಸಲಾತಿ ಪ್ರಯೋಜನ ಪಡೆಯಲು ಹುಬ್ಬಳ್ಳಿ ತಹಶೀಲ್ದಾರ್ ಕಚೇರಿಗೆ ಸುಳ್ಳು ಮಾಹಿತಿ ನೀಡಿ, 2010ರ ಆಗಸ್ಟ್ 19ರಂದು ಪರಿಶಿಷ್ಟ ಜಾತಿ ಪ್ರಮಾಣ ಪಡೆದಿದ್ದನು. ಅಲ್ಲದೆ, ತನ್ನ ಇಬ್ಬರು ಮಕ್ಕಳ ಹೆಸರಲ್ಲಿಯೂ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು, ಶಿಕ್ಷಣ ಮತ್ತು ಸೌಲಭ್ಯಗಳನ್ನು ದೊರಕಿಸಿಕೊಟ್ಟಿದ್ದನು.

ಸರ್ಕಾರಕ್ಕೆ ಹಾಗೂ ಪರಿಶಿಷ್ಟ ಜಾತಿಯವರಿಗೆ ವಂಚನೆ ಮಾಡಿರುವ ಕುರಿತು ದೂರು ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)