ಹುಬ್ಬಳ್ಳಿ: ಇಲ್ಲಿನ ನವನಗರದಲ್ಲಿರುವ ಕರ್ನಾಟಕ ಕಾನೂನು ವಿಶ್ವವಿದ್ಯಾಲಯದ ಕುಲಸಚಿವರ ಹಾಗೂ ಹಣಕಾಸು ಅಧಿಕಾರಿಗಳ ನಕಲಿ ಸಹಿ ಮಾಡಿ, ನಕಲಿ ಚೆಕ್ ಬುಕ್ ಬಳಸಿ ₹ 22.88 ಮೊತ್ತವನ್ನು ವಿಶ್ವವಿದ್ಯಾಲಯದ ಖಾತೆಯಿಂದ ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ.

ಜ. 21ರಿಂದ ಫೆ. 12ರ ಅವಧಿಯಲ್ಲಿ ವಂಚಿಸಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಬುಧವಾರ ನವನಗರ ಪೊಲೀಸ್ ಠಾಣೆಯಲ್ಲಿ ವಿ.ವಿ. ಸಹಾಯಕ ಕುಲಸಚಿವ ಡಾ. ರಂಗಸ್ವಾಮಿ ದೂರು ನೀಡಿದ್ದಾರೆ.

ವಂಚಕರು ದೆಹಲಿ ಮತ್ತು ಮುಂಬೈನ ಬ್ಯಾಂಕ್‌ಗಳಲ್ಲಿ ತಮ್ಮ ಖಾತೆಗಳಿಗೆ ಹಣ ಜಮಾ ಮಾಡಿಕೊಂಡಿದ್ದಾರೆ. ‘ಹಣ ವಂಚನೆ ಮಾಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬ್ಯಾಂಕ್ ಅಧಿಕಾರಿಗಳ ನೆರವಿನೊಂದಿಗೆ ತನಿಖೆ ಆರಂಭವಾಗಿದೆ’ ಎಂದು ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.