ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಥೆ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿ

Last Updated 16 ಫೆಬ್ರುವರಿ 2022, 4:23 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಸ್ಟೇಷನ್‌ ರಸ್ತೆಯಲ್ಲಿರುವ ಕರ್ನಾಟಕ ಅಗ್ರಿಕಲ್ಚರ್‌ ಫೌಂಡೇಷನ್‌ ಸಂಸ್ಥೆ ಹಾಗೂ ಸದಸ್ಯರ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರ, ಬೆಂಗಳೂರು, ಧಾರವಾಡ ಹಾಗೂ ಹುಬ್ಬಳ್ಳಿಯ 13 ಮಂದಿ ವಿರುದ್ಧ ಸಂಸ್ಥೆ ಕಾರ್ಯದರ್ಶಿ ಶ್ರೀಧರ ಕಠಾರೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

1974ರಲ್ಲಿ ಸಂಸ್ಥೆ ನೋಂದಣಿಯಾಗಿದ್ದು, ಇಂದಿನವರೆಗೂ ಕಾರ್ಯ ನಿರ್ವಹಿಸುತ್ತಿದೆ. ಆದರೆ, 2021ರ ಆಗಸ್ಟ್‌ 11ರಿಂದ ಸಂಸ್ಥೆಗೆ ವಂಚಿಸುವ ಉದ್ದೇಶದಿಂದ ಆರೋಪಿಗಳು ಸಂಸ್ಥೆ ಹಾಗೂ ಸದಸ್ಯರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಂಸ್ಥೆ ಹೆಸರಲ್ಲಿ ಸೀಲ್‌, ಲೆಟರ್‌ ಪ್ಯಾಡ್‌, ಠರಾವು ಪುಸ್ತಕಗಳನ್ನು ಸಹ ನಕಲಿಯಾಗಿ ಸೃಷ್ಟಿಸಿದ್ದು ಅಲ್ಲದೆ, ಲೆಕ್ಕ ಪರಿಶೋಧಕರಿಂದ ಆಡಿಟ್‌ ಮಾಡಿಸಿದ್ದಾರೆ. ನಂತರ ಅವುಗಳನ್ನು ಧಾರವಾಡ ಸಹಕಾರಿ ಸಂಘಗಳ ಉಪನಿಬಂಧಕರು ಹಾಗೂ ಧಾರವಾಡದ ಮಾಳಮಡ್ಡಿಯ ನೋಂದಣಾಧಿಕಾರಿಗಳಿಗೆ ಸಲ್ಲಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT