ಶನಿವಾರ, ಆಗಸ್ಟ್ 8, 2020
23 °C

ಧಾರವಾಡ | ಕೆರೆ ಒತ್ತುವರಿ ತೆರವಿಗೆ ಕೋರ್ಟ್‌ಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಅವಳಿ ನಗರದ ಐದು ಕೆರೆಗಳ ಒತ್ತುವರಿಯಾಗಿವೆ. ಅವುಗಳ‌ ಸರ್ವೆ ಮಾಡಿ, ಒತ್ತುವರಿ ತೆರವುಗೊಳಿಸಬೇಕು ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗುವುದು ಎಂದು ರೈತ ಸೇನಾ ರಾಜ್ಯ ಘಟಕದ ವಿರೇಶ ಸೊಬರದಮಠ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ‌ ಅವರು, ಉಣಕಲ್ ಕೆರೆ, ತೋಳನ ಕೆರೆ, ಕೆಲಗೇರಿ, ಸಾಧನಕೇರಿ ಹಾಗೂ ಕೋಳಿ ಕೆರೆ ಒತ್ತುವರಿ ಯಾಗಿವೆ ಎಂದು ಆರೋಪಿಸಿದರು.

ಮೇಲಿನ ಎಲ್ಲ ಕೆರೆಗಳ ಅಭಿವೃದ್ಧಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿದ್ದಾರೆ. ಕಾಮಗಾರಿ ಕಳಪೆಯಾಗಿದ್ದು, ಆ ಬಗ್ಹೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಅಭಿವೃದ್ಧಿಯ ಹೆಸರಿನಲ್ಲಿ ಕೆರೆಗಳ ಮುಚ್ಚುವ ಹುನ್ನಾರ ನಡೆದಿದೆ ಎಂದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು