ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ ಹುಣ್ಣಿಮೆ ಸಡಗರ

Last Updated 24 ಜೂನ್ 2021, 17:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರ ಹಾಗೂ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಗುರುವಾರ ಮುಂಗಾರಿನ ಮೊದಲ ಹಬ್ಬ ಕಾರ ಹುಣ್ಣಿಮೆ ಅಂಗವಾಗಿ ಎತ್ತುಗಳಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತಾಲ್ಲೂಕಿನ ಕಿರೇಸೂರ ಗ್ರಾಮದಲ್ಲಿ ಎತ್ತುಗಳಿಂದ ಕರಿ ಹರಿಸಲಾಯಿತು.

ರೈತರು ಎತ್ತುಗಳಿಗೆ ಸ್ನಾನ ಮಾಡಿಸಿ, ವಿವಿಧ ಬಣ್ಣಗಳಿಂದ ಅಲಂಕರಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು. ಟೆಂಗಿನಕಾಯಿ ಒಡೆದು, ನೈವೇದ್ಯ ಅರ್ಪಿಸಿ ಭಕ್ತಿ ಸಮರ್ಪಿಸಿದರು.

ನಗರದಲ್ಲಿ ಮಹಿಳೆಯರು ವಟ ಸಾವಿತ್ರಿ ವ್ರತ ಆಚರಿಸಿದರು. ಬೈಲಪ್ಪನವರ ನಗರ, ಕಮರಿಪೇಟೆ ಸೇರಿದಂತೆ ವಿವಿಧೆಡೆ ತಮ್ಮ ಮನೆಗಳ ಸಮೀಪದ ಆಲದ ಮರಕ್ಕೆ ಪೂಜೆ ಸಲ್ಲಿಸಿ ಪತಿಯ ಆರೋಗ್ಯ ಹಾಗೂ ಆಯುಷ್ಯ ಹೆಚ್ಚಾಗಿರಲಿ ಎಂದು ಪ್ರಾರ್ಥನೆ ಸಲ್ಲಿಸಿದರು. ಕೊರೊನಾ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ದೇವಸ್ಥಾನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶಕ್ಕೆ ಅವಕಾಶ ಕೊಟ್ಟಿಲ್ಲ. ಹೀಗಾಗಿ ಬಹಳಷ್ಟು ಜನ ಹೊರಗಡೆಯಿಂದಲೇ ದೇವರಿಗೆ ನಮಸ್ಕರಿಸಿದರು.

ಕಿರೇಸೂರಿನಲ್ಲಿ ಎತ್ತುಗಳ ಕರಿ ಹರಿಯುವ ಸಮಯದಲ್ಲಿ ಗ್ರಾಮದ ರೈತರಾದ ಎಸ್.ಎಫ್.ಪಾಟೀಲ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಿ.ಕೆ.ಪಾಟೀಲ, ಉಪಾಧ್ಯಕ್ಷ ಎನ್.ಎಸ್.ಗಾಳಪ್ಪನವರ, ಗ್ರಾಮದ ಹಿರಿಯರಾದ ಎಸ್.ಎಸ್‌.ಅಂಗಡಿ, ಶಿಕ್ಷಕರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ವೈ.ಎಚ್.ಬಣವಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT