ಧಾರವಾಡ: ವಚನಸಾಹಿತ್ಯ ಸಂಗ್ರಹ, ವಚನಗಳನ್ನು ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಡಾ. ಫ.ಗು.ಹಳಕಟ್ಟಿ ಅವರ ಕೊಡುಗೆ ಅಪಾರ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಡೆದ ಫ.ಗು.ಹಳಕಟ್ಟಿ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.

‘ಬಸವಾದಿ ಶರಣರ ವಚನಗಳನ್ನು ಆಧುನಿಕ ಕಾಲದಲ್ಲಿ ಜನಮನಕ್ಕೆ ತಲುಪಿಸಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ. ಅವರು ಸಮರ್ಪಣಾ ಭಾವದಿಂದ ವಚನ ಸಾಹಿತ್ಯ, ಸಂಶೋಧನೆ, ಸಂಪಾದನೆ ಕೈಗೊಂಡಿದ್ದರಿಂದಲೇ ವಚನ ಸಾಹಿತ್ಯ ನಮಗೆ ದೊರೆತಿದೆ. ಹಳಕಟ್ಟಿ ಅವರ ಬದುಕು, ಸಾಧನೆ ಕುರಿತು ಮಕ್ಕಳಿಗೆ ತಿಳಿಸಬೇಕು’ ಎಂದರು.

ಮೇಯರ್ ಜ್ಯೋತಿ ಪಾಟೀಲ ಮಾತನಾಡಿ, ‘ಶಾಲಾ-ಕಾಲೇಜುಗಳಲ್ಲಿ ಸಾಹಿತ್ಯ ಹಾಗೂ ಸಂಸ್ಕತಿಯನ್ನು ತಿಳಿಸಬೇಕು’ ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯ ರಾಮದುರ್ಗದ ಶರಣ ಸಾಹಿತಿ ಪ್ರೊ. ಸಿದ್ದಣ್ಣ ಲಂಗೋಟಿ ಅವರು ಡಾ. ಫ.ಗು.ಹಳಕಟ್ಟಿ ಅವರ ಜೀವನ, ಕೊಡುಗೆಗಳ ಕುರಿತು ಉಪನ್ಯಾಸ ನೀಡಿದರು.

ಎಂ.ಎಂ.ಕಲಬುರ್ಗಿಟ್ರಸ್ಟ್ ಅಧ್ಯಕ್ಷ ಪ್ರೊ.ವೀರಣ್ಣ ರಾಜೂರ, ಈಶ್ವರ ಹು.ಕಡ್ಲಿಮಟ್ಟಿ, ಬಸವರಾಜ ಕೊಂಗಿ, ಸದಾನಂದ ಶಾಂತಪ್ಪ ಹಳಕಟ್ಟಿ, ಕುಮಾರ ಬೆಕ್ಕೇರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.