ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ‘ನೀರು ಹರಿಸುವ ತನಕವೂ ಹೋರಾಟ’

ರೈತ ಹುತಾತ್ಮ ದಿನಾಚರಣೆ, ವೀರಗಲ್ಲಿಗೆ ಗೌರವ ಸಲ್ಲಿಕೆ
Last Updated 21 ಜುಲೈ 2020, 16:40 IST
ಅಕ್ಷರ ಗಾತ್ರ

ನವಲಗುಂದ: ರೈತ ವಿರೋಧಿಯಾಗಿರುವ ಭೂ ಸುಧಾರಣಾ ಹಾಗೂ ಎಪಿಎಂಸಿತಿದ್ದುಪಡಿಕಾಯ್ದೆಸುಗ್ರಿವಾಜ್ಞೆಗಳನ್ನು ತಕ್ಷಣವೇ ವಾಪಸ್‌ ಪಡೆಯಬೇಕು. ಮಹದಾಯಿ ಯೋಜನೆಯನ್ನು ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಜೆಡಿಎಸ್‌ ಮುಖಂಡಎನ್.ಎಚ್. ಕೋನರಡ್ಡಿ ನೇತೃತ್ವದಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮಂಗಳವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ರೈತ ಹುತಾತ್ಮ ದಿನಾಚರಣೆ ಅಂಗವಾಗಿ ಇಲ್ಲಿಯ ಬಸಪ್ಪ ಲಕ್ಕುಂಡಿ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ‘ಐದು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿದ್ದಿಂದ ಮಹದಾಯಿ ವಿಷಯದಲ್ಲಿ ರಾಜ್ಯಕ್ಕೆ13.42 ಟಿ.ಎಂ.ಸಿ ನೀರು ಹಂಚಿಕೆ ಮಾಡಲಾಗಿದೆ’ ಎಂದರು.

‘ನ್ಯಾಯಾಧೀಕರಣದ ಆದೇಶ, ಸುಪ್ರೀಂ ಕೋರ್ಟ್‌ ನಿರ್ದೇಶನ, ಕೇಂದ್ರದ ಅಧಿಸೂಚನೆ ಎಲ್ಲವೂ ರಾಜ್ಯದ ಪರವಾಗಿವೆ. ಆದರೂ ಗೋವಾಖ್ಯಾತೆ ತೆಗೆದು ಹೊಸ ಅರ್ಜಿ ಸಲ್ಲಿಸಿದೆ. ಇದರಿಂದ ಈ ಭಾಗದ ಹೋರಾಟಗಾರರಲ್ಲಿ ಆತಂಕ ಎದುರಾಗಿದ್ದು, ರಾಜ್ಯ ಸರ್ಕಾರ ಆದಷ್ಟು ಬೇಗನೆಟೆಂಡರ್ ಕರೆದು ಡ್ಯಾಂ ನಿರ್ಮಿಸಲು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

‘ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಉದ್ಯಮಿಗಳಿಗೆ ಹಾಗೂ ಶ್ರೀಮಂತರಿಗೆ ಅನುಕೂಲವಾಗುತ್ತಿದೆ. ಅನ್ನದಾತರಿಗೆ ಅನ್ಯಾಯವಾಗುತ್ತದೆ. ಅತಿವೃಷ್ಠಿಯಿಂದ ಹಾನಿಯಾದ ಕುಟುಂಬಗಳಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ.ಮಲಪ್ರಭೆಗೆ ಮಹದಾಯಿ ನೀರು ಹರಿಯುವ ತನಕ ಹೋರಾಟ ನಿರಂತರವಾಗಿರುತ್ತದೆ’ ಎಂದರು.

ಪ್ರತಿ ವರ್ಷ ಹುತಾತ್ಮ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲುಸಾವಿರಾರು ಸಂಖ್ಯೆಯಲ್ಲಿ ರೈತರು ಇಲ್ಲಿಗೆ ಬರುತ್ತಿದ್ದರು. ಈ ವರ್ಷ ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌ ಇರವ ಕಾರಣ ಮಾಲಾರ್ಪಣೆ ಮಾಡಲು ಐದು ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು.

ಶಿವಣ್ಣ ಹುಬ್ಬಳ್ಳಿ, ಅಪ್ಪಣ್ಣ ಹಳ್ಳದ, ದೇವೇಂದ್ರಪ್ಪ ಹಳ್ಳದ, ಅಮೃತ ಇಜಾರೆ, ಪುರಸಭೆ ಸದಸ್ಯರಾದ ಜೀವನ ಪವಾರ, ಪ್ರಕಾಶ ಶಿಗ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT