ಶುಕ್ರವಾರ, ಡಿಸೆಂಬರ್ 3, 2021
20 °C

ಪ್ರಾರ್ಥನಾ ಮಂದಿರಕ್ಕೆ ನುಗ್ಗಿ ದಾಳಿ: ಎಫ್‌ಐಆರ್‌ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಇಲ್ಲಿನ ಬೈರಿದೇವರಕೊಪ್ಪದ ಪ್ರಾರ್ಥನಾ ಮಂದಿರಕ್ಕೆ ವಿವಿಧ ಸಂಘಟನೆಯ 60ರಿಂದ 70 ಜನ ನುಗ್ಗಿ ದಾಂಧಲೆ ಮಾಡಿದ್ದಾರೆ ಎಂದು ಗಂಗಾ ಎನ್ನುವವರು ಶುಕ್ರವಾರ ನವನಗರ ಎಪಿಎಂಸಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಎಫ್‌ಐಆರ್‌ ದಾಖಲಾಗಿದೆ.

ಹಿಂದೂ ಧರ್ಮದ ವ್ಯಕ್ತಿಯನ್ನು ಬಲವಂತವಾಗಿ ಮತಾಂತರ ಮಾಡಲು ಸೋಮು ಅವರಾಧಿ ಎಂಬ ವ್ಯಕ್ತಿ ಪ್ರಚೋದನೆ ನೀಡಿದ್ದಾನೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರಾರ್ಥನಾ ಮಂದಿರಕ್ಕೆ ನುಗ್ಗಿದ್ದರು.  ಸಾಮಾಜಿಕ ತಾಣದಲ್ಲಿ ವಿಡಿಯೊ ವೈರಲ್‌ ಆಗಿದ್ದವು.

ಈ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಪ್ರಚೋದನೆಗೆ ಯತ್ನಿಸಿದ ಆರೋಪದ ಮೇಲೆ ಸೋಮು ಅವರಾಧಿ ವಿರುದ್ಧ ವಿಶ್ವನಾಥ ಬೂದೂರು ಎಂಬುವವರು ಎಫ್‌ಐಆರ್‌ ದಾಖಲಿಸಿದ್ದಾರೆ. ಇದೇ ಗಲಾಟೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೂ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.