ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಕಬ್ಬಿನ ಗದ್ದೆಗಳಲ್ಲಿ ವಿದ್ಯುತ್‌ ತಂತಿಗಳಿಂದ ಬೆಂಕಿ: ಸುಟ್ಟ ಕರಕಲಾದ ಕಬ್ಬು

Last Updated 7 ಜನವರಿ 2022, 14:34 IST
ಅಕ್ಷರ ಗಾತ್ರ

ಕಲಘಟಗಿ: ಪಟ್ಟಣದ ಹಳಿಯಾಳ ರಸ್ತೆಯ ಮಂಗೇಶ ಕೆರೆಯ ಹತ್ತಿರದ ಹಲವು ರೈತರ ಕಬ್ಬಿನ ಗದ್ದೆಗಳಲ್ಲಿ ಗುರುವಾರ ವಿದ್ಯುತ್‌ ತಂತಿಗಳಿಂದ ಉಂಟಾದ ಅವಘಡದಲ್ಲಿ ನೂರಾರು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರೂ ನೂರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಸಂಬಂಧಪಟ್ಟ ಹೆಸ್ಕಾಂ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳ ಪರಿಶೀಲಿಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ರೈತರ ಜಮೀನಿನಲ್ಲಿ ವಿದ್ಯುತ್ ತಂತಿಗಳು ಕೆಳ ಮಟ್ಟದಲ್ಲಿ ನೇತಾಡುತ್ತಿವೆ. ಇವುಗಳನ್ನು ಸರಿಪಡಿಸುವಂತೆ ಹಲವಾರು ಬಾರಿ ಹೆಸ್ಕಾಂ ಸಿಬ್ಬಂದಿಗೆ ತಿಳಿಸಿದರೂ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅಲ್ಲಿನ ರೈತರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT