ಭಾನುವಾರ, ಏಪ್ರಿಲ್ 2, 2023
32 °C

ಹುಬ್ಬಳ್ಳಿ: ರವಾ ಮಿಲ್ ನಲ್ಲಿ ಅಗ್ನಿ ಅವಘಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ:  ನಗರದ ವೀರಾಪೂರ ಓಣಿಯಲ್ಲಿರುವ ಟಿ.ಕೆ. ಹಬೀಬ ರವಾ ಮಿಲ್ ಗೆ ಬೆಂಕಿ ತಗುಲಿದ್ದು, ಮೊದಲ ಮಹಡಿಯಲ್ಲಿ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗಿದೆ.  ಇದು ಸುತ್ತಮುತ್ತಲಿನ ಜನರಲ್ಲಿ ಆತಂಕ ಮೂಡಿಸಿದೆ.

ಗುರುವಾರ ಬೆಳಗಿನ ಜಾವ ಘಟನೆ ನಡೆದಿದ್ದು,  ರವಾ ಮಿಲ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದೆ. ಕಟ್ಟಡದ ಮೇಲಿನ ಭಾಗದಲ್ಲಿ ಹೊತ್ತಿರುವ ಬೆಂಕಿ ಎಲ್ಲ ಕಡೆಯೂ ಆವರಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು