ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿಯಿಂದ ಬೆಳಗಾವಿಗೆ ಬೈಕ್‌ ರ‍್ಯಾಲಿ ನಾಳೆ

Last Updated 20 ಡಿಸೆಂಬರ್ 2021, 13:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಬೆಳಗಾವಿ ಸುವರ್ಣ ವಿಧಾನಸೌಧದ ಎದುರು 108 ಅಡಿಯ ಚನ್ನಮ್ಮ ಮತ್ತು ರಾಯಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ಇಡಬೇಕು. ಹಾಗೂ ರಾಜ್ಯದಲ್ಲಿ ಎಂಇಎಸ್ ನಿಷೇಧಿಸಬೇಕು ಎನ್ನುವ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 22 ರಂದು ಬೆಳಿಗ್ಗೆ 11ಕ್ಕೆ ಹುಬ್ಬಳ್ಳಿ ಚನ್ನಮ್ಮ ವೃತ್ತದಿಂದ ಬೆಳಗಾವಿ ಸುವರ್ಣ ಸೌಧದವರೆಗೆ ಬೈಕ್‌ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದುಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯ ಧಾರವಾಡ ಜಿಲ್ಲಾ ಘಟಕದ ಕಾರ್ಯದರ್ಶಿ ಎಚ್‌ಎಫ್‌. ಮುದುಕಣ್ಣವರ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳ ಕಠಿಣ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಿವಾನಂದ ಮುತ್ತಣ್ಣವರ ಮಾತನಾಡಿ, ರಾಯಣ್ಣರ ಮೂರ್ತಿಯನ್ನು ಭಗ್ನಗೊಳಿಸಿದ ಕಿಡಿಗೇಡಿಗಳನ್ನು ಬಂಧನ ಮಾಡಿದರೆ ಸಾಲದು. ಅವರ ಹಿಂದೆ ಯಾವ್ಯಾವ ಪಕ್ಷದ ಮುಖಂಡರು ಇದ್ದಾರೆ ಎಂದು ಪತ್ತೆ ಹಚ್ಚಬೇಕು. ಬೆಳಗಾವಿಯಲ್ಲಿ ಕೆಲವು ಎಂಇಎಸ್‌ ಮುಖಂಡರು ಅವರಿಗೆ ಬೆಂಬಲ ನೀಡುತ್ತಿದ್ದು, ಅವರು ಯಾರು ಎಂದು ತನಿಖೆ ನಡೆಸಬೇಕು. ಕನ್ನಡ ನೆಲೆದಲ್ಲಿಯೇ ಇದ್ದು ಎಲ್ಲ ಸೌಲಭ್ಯ ಪಡೆದು ನಾಡ ದ್ರೋಹಿ‌ ಕೆಲಸ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ತಾಲೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT