ಗುರುವಾರ , ಅಕ್ಟೋಬರ್ 1, 2020
28 °C

ಪ್ರವಾಹ ಸ್ಥಿತಿ: 13 ಹಳ್ಳಿಗಳಿಗೆ ಅಧಿಕಾರಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಪ್ರವಾಹ ಪರಿಸ್ಥಿತಿ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕಿನ ಬೆಣ್ಣೆಹಳ್ಳ ಪಾತ್ರದ 13 ಹಳ್ಳಿಗಳಿಗೆ ನೋಡಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಗ್ರಾಮೀಣ ತಹಶೀಲ್ದಾರ್‌ ಪ್ರಕಾಶ್ ನಾಸಿ ಹೇಳಿದರು.

ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತು ನಗರದ ಮಿನಿವಿಧಾನ ಸೌಧದಲ್ಲಿ ಶುಕ್ರವಾರ ನೋಡಲ್‌ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ‘ಗ್ರಾಮ ಮಟ್ಟದಲ್ಲಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಾಧಿಕಾರಿ ಒಳಗೊಂಡ ತಂಡ ರಚಿಸಲಾಗಿದೆ. ಇವರೊಂದಿಗೆ ಗ್ರಾಮದ ಯುವಕರು, ಹಿರಿಯರನ್ನು ಒಳಗೊಂಡ ಸ್ವಯಂ ಸೇವಕರ ತಂಡವನ್ನೂ ರಚನೆ ಮಾಡಲಾಗಿದೆ’ ಎಂದರು.

‘ನೋಡಲ್ ಅಧಿಕಾರಿಗಳು ಗ್ರಾಮಗಳಿಗೆ ತೆರಳಿ ಪರಿಸ್ಥಿತಿ ಬಗ್ಗೆ ಸಭೆ ನಡೆಸಬೇಕು. ಗ್ರಾಮದ ಪ್ರತಿಯೊಬ್ಬರ ಬಗ್ಗೆಯೂ ವಿವರ ಸಂಗ್ರಹಿಸಬೇಕು. ಮಹಿಳೆಯರು, ಮಕ್ಕಳು ಮತ್ತು ಗರ್ಭಿಣಿಯರ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಹಳ್ಳದ ಪಾತ್ರದಲ್ಲಿ ಅಪಾಯ ಮಟ್ಟಕ್ಕೆ ಸಿಲುಕುವ ವಸತಿಗಳಿಂದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು‌’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಹಾಗೂ ಎಂಜಿನಿಯರ್ ಜಂಟಿಯಾಗಿ 24 ತಾಸಿನೊಳಗೆ ಹಾನಿಗೊಳಗಾದ ಮನೆಗಳ ಪರಿಶೀಲನೆ ನಡೆಸಿ, ಶೇಕಡಾವಾರು ಹಾನಿಯ ಮಾಹಿತಿ ಕೊಡಬೇಕು. ಜಾನುವಾರುಗಳ ಮಾಹಿತಿ ಸಂಗ್ರಹಿಸಿ ಅಗತ್ಯ ಲಸಿಕೆ ಹಾಗೂ ಔಷಧ ಸಿದ್ಧವಾಗಿಟ್ಟುಕೊಳ್ಳಬೇಕು. ಗ್ರಾಮದಲ್ಲಿನ ಉತ್ತಮ ಈಜುಗಾರರು, ಜೆಸಿಬಿ, ಟ್ರಾಕ್ಟರ್‌ ಮಾಲೀಕರ ಮಾಹಿತಿ ಕಲೆ ಹಾಕಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು