ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಂಕರಾಚಾರ್ಯರ ತತ್ವಾದರ್ಶ ಅಳವಡಿಸಿಕೊಳ್ಳಿ: ಪ್ರಕಾಶ ನಾಶಿ

Last Updated 6 ಮೇ 2022, 16:04 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಸಮಾಜದ ಸುಧಾರಣೆಗೆ ಶಂಕರಾಚಾರ್ಯರ ಕೊಡುಗೆ ಅಪಾರ. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಶಿ ಹೇಳಿದರು.

ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶಂಕರಾಚಾರ್ಯರ ಬೋಧನೆಗಳು ನಮಗೆ ದಾರಿ ದೀಪವಾಗಿವೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು. ಅವರ ತತ್ವಗಳು ಸಾರ್ವಕಾಲಿಕವಾಗಿವೆ. ಶಂಕರಾಚಾರ್ಯರು ವೇದಕಾಲದಿಂದಲೂ ಪ್ರಚಲಿತವಿರುವ ಅದ್ವೈತ ಸಿದ್ಧಾಂತ ಪ್ರತಿಪಾದಿಸಿದರು. ಮಾನವ ಕುಲಕ್ಕೆ ಜ್ಞಾನ ನೀಡಿದರು’ ಎಂದರು.

ಸಮಾಜದ ಮುಖಂಡರಾದ ಭಾಸ್ಕರ ಪಾಟೀಲ, ಶಂಕರರಾವ ದೇಶಪಾಂಡೆ, ಪ್ರಮೋದ ಮನೋಳಿ, ಸಂಜೀವ ಜೋಶಿ, ಮುರಳಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT