ಶುಕ್ರವಾರ, ಜನವರಿ 24, 2020
16 °C

ಮಾಜಿ ಸಚಿವ ಮಲ್ಲಾರಿಗೌಡ ಪಾಟೀಲ ಅಂತ್ಯಸಂಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಂಕೇಶ್ವರ: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಮಹಾಸಭೆಯ ಉಪಾಧ್ಯಕ್ಷ ಮಲ್ಲಾರಿಗೌಡ ಪಾಟೀಲ (79) ಅಂತ್ಯಸಂಸ್ಕಾರ ಅವರ ತೋಟದಲ್ಲಿ ಬುಧವಾರ ನೆರವೇರಿತು. ಕುಟುಂಬ ಸದಸ್ಯರು, ವಿವಿಧ ಮಠಾಧೀಶರು, ಶಾಸಕರು ಸೇರಿದಂತೆ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದರು.

ಮಲ್ಲಾರಿಗೌಡ ಅವರು ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ಕೊನೆಯುಸಿರೆಳೆದಿದ್ದರು. ಶಾಸಕರಾದ ಉಮೇಶ ಕತ್ತಿ, ಲಕ್ಷ್ಮಿ ಹೆಬ್ಬಾಳಕರ, ಮಾಜಿ ಸಚಿವರಾದ ಪ್ರಕಾಶ ಹುಕ್ಕೇರಿ, ಶಶಿಕಾಂತ ನಾಯಿಕ, ವೀರಕುಮಾರ ಪಾಟೀಲ, ನಿಡಸೋಸಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಚಿಕ್ಕೋಡಿಯ ಸಂಪಾದನಾ ಮಠದ ಸ್ವಾಮೀಜಿ ಸೇರಿದಂತೆ ಹಲವಾರು ಪ್ರಮುಖರು ಬುಧವಾರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮಧ್ಯಾಹ್ನ 12-30 ಕ್ಕೆ ಆರಂಭವಾದ ಪಾರ್ಥಿವ ಶರೀರದ ಮರವಣಿಗೆ ಸುಮಾರು 2 ತಾಸುಗಳವರೆಗೆ ನಡೆಯಿತು. ಮಧ್ಯಾಹ್ನ 3 ಗಂಟೆಗೆ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು