ಸೋಮವಾರ, ನವೆಂಬರ್ 30, 2020
24 °C

ಐವರು ಸಿಬಿಐ ಅಧಿಕಾರಿಗಳಿಂದ ಮಾಜಿ ಸಚಿವ ವಿನಯ ಕುಲಕರ್ಣಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ನಗರದ ಗೋಕುಲ್ ರಸ್ತೆಯ ಬಳಿಯಿರುವ ಹೊಸ ಸಿಎಆರ್ ಮೈದಾನಕ್ಕೆ ಕರೆತಂದಿದ್ದಾರೆ.

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ಅವರನ್ನು ಸಿಬಿಐ ಅಧಿಕಾರಿಗಳ ತಂಡ ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದೆ. ಸಿಎಆರ್ ಮೈದಾನದ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಹಾಕಲಾಗಿದೆ.

'ಐವರು ಸಿಬಿಐ ಅಧಿಕಾರಿಗಳು ವಿನಯ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಬೆಳಿಗ್ಗೆ 9.30ರ ವೇಳೆ ಅವರನ್ನು ಬೆಳಗಾವಿಯಿಂದ ಇಲ್ಲಿಗೆ ಕರೆದುಕೊಂಡು ಬರಲಾಗಿದೆ. ಅವರ ಜನ್ಮದಿನ ಇರುವುದರಿಂದ ಕಾರ್ಯಕರ್ತರು, ಅಭಿಮಾನಿಗಳು  ಬರಬಹುದೆಂದು ಮೈದಾನದ ಸುತ್ತ ಬಂದೋಬಸ್ತ್ ಹಾಕಲಾಗಿದೆ. ಸಂಜೆ ವೇಳೆ ಧಾರವಾಡಕ್ಕೆ ಕರೆದೊಯ್ಯುವ ಸಾಧ್ಯತೆಯಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು