ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ

Last Updated 8 ಆಗಸ್ಟ್ 2022, 16:11 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕಳಸಾ ಬಂಡೂರಿ, ಮಹದಾಯಿ ಯೋಜನೆ ಕಾಮಗಾರಿ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನಾ ರ‍್ಯಾಲಿ ನಡೆಸಿದರು.

ರೈಲ್ವೆ ನಿಲ್ದಾಣದಿಂದ ಚನ್ನಮ್ಮ ವೃತ್ತದವರೆಗೆ ನೂರಾರು ರೈತರು ಪಾದಯಾತ್ರೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಸಿದ್ದರಾಜ ಕುಂದಗೋಳ, ‘ರಾಜಕೀಯ ಪಕ್ಷಗಳು ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದು, ನಂತರ ರೈತರನ್ನೇ ಸಂಪೂರ್ಣವಾಗಿ ಕಡೆಗಣಿಸುತ್ತವೆ. ಸಣ್ಣ ಸಮಸ್ಯೆಗಳಿಗೂ ಪ್ರತಿಭಟನೆ ನಡೆಸಿಯೇ ಪರಿಹಾರ ಕಂಡುಕೊಳ್ಳಬೇಕಿದೆ. ರೈತರ ಯಾವ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸುವುದಿಲ್ಲ. ಮಹದಾಯಿ ಯೋಜನೆ ಅನುಷ್ಠಾನಕ್ಕೆ ರೈತ ಸಂಘಟನೆಗಳು ನಿರಂತರ ಹೋರಾಟ ನಡೆಸುತ್ತಿವೆ. ಅದನ್ನು ರಾಜಕೀಯ ಪಕ್ಷಗಳು ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳುತ್ತಿವೆ’ ಎಂದು ಆರೋಪಿಸಿದರು.

‘ರೈತರಿಗೆ ಬೆಳೆ ವಿಮೆ ಪರಿಹಾರ ನೀಡಬೇಕು, ಕೃಷಿ ಕೂಲಿ ಕಾರ್ಮಿಕರ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಬೇಕು, 2018-19ರ ಸಾಲ ಮನ್ನಾ ಯೋಜನೆಯ ಫಲಾನುಭವಿ ರೈತರ ಬಾಕಿ ಹಣ ಸಂದಾಯ ಮಾಡಬೇಕು’ ಎಂದು ಆಗ್ರಹಿಸಿದರು.

ಸಂಘದ ಪದಾಧಿಕಾರಿಗಳಾದ ಶಿವಾನಂದ ಹೊಸಳ್ಳಿ, ಸೋಮಣ್ಣ ಎಸ್‌., ಈರನಗೌಡ ಪಾಟೀಲ, ಯಲಪ್ಪ ತಡಸದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT