ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ನಿಂತಿದ್ದವರ ಮೇಲೆ ಲಾರಿ ಹರಿದು 4 ಸಾವು

Published 6 ಜನವರಿ 2024, 6:15 IST
Last Updated 6 ಜನವರಿ 2024, 6:15 IST
ಅಕ್ಷರ ಗಾತ್ರ

ಧಾರವಾಡ: ಕುಂದಗೋಳ ತಾಲ್ಲೂಕಿನ ಬೆಳ್ಳಿಗಟ್ಟಿ ಸಮೀಪ ಹೆದ್ದಾರಿ ಬದಿ ನಿಂತಿದ್ದವರ ಮೇಲೆ ಲಾರಿ ಹರಿದು ನಾಲ್ವರು ಮೃತಪಟ್ಟಿರುವ ಘಟನೆ ನಸುಕಿನಲ್ಲಿ ಸಂಭವಿಸಿದೆ.

ಮಣಿಕಂಠ, ಚಂದನ್, ಪವನ್ ಮತ್ತು ಹರೀಶ್ ಕುಮಾರ್ ಮೃತಪಟ್ಟವರು.

'ಹಾಸನ ಜಿಲ್ಲೆಯ ಅರಕಲಗೂಡಿನಿಂದ ಗೋವಾ ಕಡೆಗೆ ಸಂಚರಿಸುತ್ತಿದ್ದ ಕಾರು ಮತ್ತು ಬೆಂಗಳೂರಿನಿಂದ ಶಿರಡಿ ಕಡೆಗೆ ಸಂಚರಿಸುತ್ತಿದ್ದ ಕಾರು ನಸುಕಿನ 4.30ರ ಹೊತ್ತಿನಲ್ಲಿ ಡಿಕ್ಕಿಯಾಗಿವೆ. ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸಿ ರಸ್ತೆ ಬದಿ ನಿಂತಿದ್ದವರ ಮೇಲೆ ಲಾರಿ ಹರಿದಿದೆ. ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT