ಶನಿವಾರ, ಫೆಬ್ರವರಿ 29, 2020
19 °C

ಭೀಕರ ಅಪಘಾತ: ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ರಾಷ್ಟ್ರೀಯ ಹೆದ್ದಾರಿ 4ರ ಯರಿಕೊಪ್ಪ ಬಳಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಕುಂದಗೊಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ.

ಇಂಡಿಕಾ ಕಾರಿನಲ್ಲಿ ಹೊರಟಿದ್ದ ಸ್ವಾಮೀಜಿ ಕಾರಿನ ಮುಂಭಾಗದಲ್ಲಿ ಕುಳಿತಿದ್ದರು. ಅಪಘಾತದಲ್ಲಿ ಸ್ವಾಮೀಜಿ ಹಾಗೂ ಚಿಕ್ಕೊಡಿ ತಾಲ್ಲೂಕಿ ಕಬ್ಬೂರು ಗ್ರಾಮದ ಚಾಲಕ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಬಸಪ್ಪ ಪೂಜಾರ, ಸಿದ್ದಪ್ಪ ಇಂಗಳಳ್ಳಿ, ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಸಂಬಂಧಿ ಸೋಮಣ್ಣ ದೇಸಾಯಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮತ್ತೊಂದು ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಹೆಸರು ತಿಳಿದು ಬಂದಿಲ್ಲ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕ್ರೇನ್ ಸಹಾಯದಿಂದ ಕಾರುಗಳನ್ನು ಪಕ್ಕಕ್ಕೆ ಸರಿಸಿ, ಮೃತದೇಹ ಹೊರಕ್ಕೆ ತೆಗೆಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು