ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಲ್ಕು ಅನಧಿಕೃತ ಬಡಾವಣೆ ತೆರವು

Last Updated 8 ಮೇ 2022, 4:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಉಣಕಲ್‌ನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ನಾಲ್ಕು ಬಡಾವಣೆಗಳನ್ನು ಹುಬ್ಬಳ್ಳಿ–ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ (ಹುಡಾ) ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.

ಜೆಸಿಬಿಯೊಂದಿಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಅಕ್ರಮ ಬಡಾವಣೆಗಳಲ್ಲಿನ ಚರಂಡಿಗಳನ್ನು ಧ್ವಂಸಗೊಳಿಸಿದರು. ಗುರುತು ಕಲ್ಲುಗಳನ್ನು ತೆರವು ಮಾಡಿದರು. ಈ ವೇಳೆ ಬಡಾವಣೆಗಳ ಮಾಲೀಕರು, ನಿವೇಶನ ಖರೀದಿಸಿದವರು ಕಾರ್ಯಾಚರಣೆಗೆ ಅಡ್ಡಿಪಡಿಸಿದರು. ಕೆಲವರು ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.

‘ನಿವೇಶನದ ಕಲ್ಲುಗಳನ್ನು ತೆರವು ಮಾಡಿ, ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಳಿಸುವಂತೆ ಅವುಗಳ ಮಾಲೀಕರಿಗೆ ನೋಟಿಸ್‌ ನೀಡಲಾಗಿತ್ತು. ಗಡುವು ಮುಗಿದ ಕಾರಣ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ’ ಎಂದು ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಅನುಮತಿ ಪಡೆದಯದೇ ನಿರ್ಮಿಸಿದ ಬಡಾವಣೆಗಳ ವಿರುದ್ಧ ಹುಡಾ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ. ಇಂಥ ಬಡಾವಣೆಗಳು ನಗರದ ಸೌಂದರ್ಯಕ್ಕೆ ಧಕ್ಕೆ ತರಲಿವೆ. ಭವಿಷ್ಯದಲ್ಲಿ ಮೂಲಕ ಸೌಕರ್ಯ ಕಲ್ಪಿಸಲು ತೊಂದರೆ ಆಗಲಿದೆ. ನಿವೇಶನ ಖರೀದಿ ಮಾಡುವ ಮುನ್ನ ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸಬೇಕು’ ಎಂದು ಹೇಳಿದರು.

ಆಯುಕ್ತ ಎನ್.ಎಚ್.ಕುಮ್ಮಣ್ಣನವರ, ನಗರ ಯೋಜಕ ಸದಸ್ಯ ವಿವೇಕ ಕಾರೇಕರ, ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ರಾಜಶೇಖರ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರಾಜೇಂದ್ರ ಕೊಕ್ಕಳಕಿ, ಬಿ.ಎಸ್.ಪಾಟೀಲ, ಮುಕುಂದ ಜೋಶಿ, ಬಸವರಾಜ ದೇವಗಿರಿ, ಮೌನೇಶ ಬಡಿಗೇರ, ಆರ್.ಜಿ.ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT