ಬುಧವಾರ, ಮೇ 25, 2022
29 °C

ಬಿಟ್‌ಕಾಯಿನ್‌ ಹಗರಣ: ಹೆಸರು ಬಹಿರಂಗಕ್ಕೆ ಪರಮೇಶ್ವರ್ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ಬಿಟ್‌ ಕಾಯಿನ್‌’ ಹಗರಣದಲ್ಲಿ ಭಾಗಿಯಾದವರ ಪೈಕಿ ಕಾಂಗ್ರೆಸ್ ಮುಖಂಡರ ಹೆಸರುಗಳಿವೆ ಎನ್ನುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಜಿ. ಪರಮೇಶ್ವರ ‘ಕೂಡಲೇ ಹೆಸರುಗಳನ್ನು ಬಹಿರಂಗಗೊಳಿಸಬೇಕು’ ಎಂದು ಸವಾಲು ಹಾಕಿದ್ದಾರೆ.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಈ ಹಗರಣದಿಂದ ಯಾವ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಉದ್ಯಮಿಗಳು ಲಾಭ ಪಡೆದುಕೊಂಡಿದ್ದಾರೆ ಎನ್ನುವುದನ್ನು ಮುಖ್ಯಮಂತ್ರಿ ಬಹಿರಂಗಗೊಳಿಸಬೇಕು. ನಮ್ಮ ಪಕ್ಷದವರು ಹೆಸರುಗಳಿದ್ದರೆ ಕಾನೂನು ರೀತಿಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿ. ನಾವು ಪಕ್ಷದ ವತಿಯಿಂದಲೂ ಕ್ರಮ ಕೈಗೊಳ್ಳುತ್ತೇವೆ’ ಎಂದರು.

‘ಹಗರಣದಲ್ಲಿ ಭಾಗಿಯಾದವರ ಪೈಕಿ ಎರಡ್ಮೂರು ಹೆಸರುಗಳು ನನಗೂ ಗೊತ್ತಿವೆ. ಖಚಿತವಾಗದ ಹೊರತು ಬಹಿರಂಗಪಡಿಸುವುದಿಲ್ಲ’ ಎಂದರು.

ಇದನ್ನೂ ಓದಿ.. ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ಮುಖಂಡರ ಹೆಸರುಗಳಿವೆ: ಸಿಎಂ ಬೊಮ್ಮಾಯಿ ಆರೋಪ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು