ಹುಬ್ಬಳ್ಳಿ: ಇಲ್ಲಿನ ಬೈರಿದೇವರಕೊಪ್ಪದ ಬಳಿಗಾರ ಹಕ್ಕಲದಲ್ಲಿನ ಕಲ್ಪತರು ನಿಲಯದ ಜಾನಪದ ಜಗಲಿ ಸಭಾಭವನದಲ್ಲಿ ಈಚೆಗೆ ನಡೆದ ದತ್ತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸೃಜನಶೀಲ ಸಾಹಿತಿ, ನಾಟಕಕಾರ, ಗದಿಗೆಯ್ಯ ವಿ. ಹಿರೇಮಠ (ಜೀವಿ) ಅವರಿಗೆ ಮಾತೋಶ್ರೀ ಅಂದಮ್ಮ ಸಿದ್ದನಗೌಡ ಜಕ್ಕನಗೌಡ್ರ ಸ್ಮರಣಾರ್ಥ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಮಾಹಾವೀರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಟಿ. ತವನಪ್ಪನವರ, ‘ಪ್ರಶಸ್ತಿ ನೀಡುವ ಇಂತಹ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ. ಸಾಧಕರನ್ನು, ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸುವುದು ಅಗತ್ಯ’ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ, ‘ಪ್ರತಿಭಾವಂತರು ಬೆಳೆಯಬೇಕಾದರೆ ಇಂತಹ ಪ್ರಶಸ್ತಿಗಳು ಇರಬೇಕು. ಅದನ್ನು ಜಕ್ಕನಗೌಡ್ರ ತಮ್ಮ ತಾಯಿ ಹೆಸರಿನಲ್ಲಿ ಮಾಡುತ್ತಿರುವುದು ಪ್ರಶಂಸನೀಯ’ ಎಂದರು.

ಪ್ರಶಸ್ತಿ ಸ್ವೀಕರಿಸಿದ ಗದಿಗೆಯ್ಯ ಅವರು, ‘ಪ್ರಶಸ್ತಿಯು ನನ್ನ ಜವಾಬ್ದಾರಿ ಹೆಚ್ಚಿಸಿದೆ. ಈ ಪ್ರಶಸ್ತಿಯ ಹಿರಿಮೆ ಹೆಚ್ಚಿಸುವಂತೆ ನನ್ನ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಗಳನ್ನು ಮುಂದುವರಿಸುತ್ತೇನೆ’ ಎಂದರು.

ಜನಪದರು ಕರ್ನಾಟಕ ಜಾನಪದ ಜಗತ್ತು ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿಗೆ ನಿಧಿ ಸ್ಥಾಪಿಸಿದ ದಾನಿಗಳನ್ನು, ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದವರನ್ನು ಸನ್ಮಾನಿಸಲಾಯಿತು.

ಜಾನಪದ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಎಚ್.ಎಚ್. ನದಾಫ ಮಾತನಾಡಿದರು. ಕನಕದಾಸ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಶಾಂತಣ್ಣ ಕಡಿವಾಲ ಅಧ್ಯಕ್ಷತೆ ವಹಿಸಿದ್ದರು. ಶರಣಪ್ಪ ಕೊಟಗಿ, ಉದ್ಯಮಿ ಬಸವರಾಜ ಸುಳ್ಳದ, ವಿಮಲಕೀರ್ತಿ ತಾಳಿಕೋಟಿ, ವಿ.ಜಿ. ಪಾಟೀಲ, ಆರ್.ಎಂ. ಹಿರೇಮಠ, ರವೀಂದ್ರನಾಥ ದೊಡ್ಡಮೇಟಿ, ಎ.ಬಿ. ಕೊಪ್ಪದ, ಶಹರ ಶರಣ ಸಾಹಿತ್ಯ ಪರಿಷತ್ತಿನ ಗುರುಸಿದ್ದಪ್ಪ ಬಡಿಗೇರ, ರಾಮು ಮೂಲಗಿ ಇದ್ದರು.

ಗಂಗಮ್ಮ ಗಿರಿಯಪ್ಪಗೌಡ ಬಾಳನಗೌಡರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಮಕ್ಕಳಿಗೆ ಕಲಿಕಾ ಸಾಮಗ್ರಿ ಹಾಗೂ ಸಮವಸ್ತ್ರ ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.