ಬುಧವಾರ, ಮಾರ್ಚ್ 22, 2023
21 °C
ಜಲಪಾತದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಿಸಿದ್ದ ಧೀರ

ಹುಬ್ಬಳ್ಳಿಯ ಆದಿತ್ಯ ಶಿವಳ್ಳಿಗೆ ಶೌರ್ಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಜಲಪಾತದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿ ಸಾಹಸ ಮೆರೆದಿದ್ದ ಹುಬ್ಬಳ್ಳಿಯ ನವನಗರದ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿ ಆದಿತ್ಯ ಎಂ. ಶಿವಳ್ಳಿ ಅವರು, ಭಾರತೀಯ ಮಕ್ಕಳ ಕಲ್ಯಾಣ ಪರಿಷತ್ತು (ಐಸಿಸಿಡಬ್ಲ್ಯೂ) ಗಣರಾಜ್ಯೋತ್ಸವದ ಅಂಗವಾಗಿ ನೀಡುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ಈಜುಪಟು ಕೂಡ ಆಗಿರುವ ನಗರದ ಕುಸುಗಲ್ ರಸ್ತೆಯ ಸನ್‌ ಸಿಟಿ ಹೆರಿಟೇಜ್ ನಿವಾಸಿ ಆದಿತ್ಯ, ಸದ್ಯ  ಬಿಬಿಎ–ಎಲ್‌ಎಲ್‌ಬಿ 5ನೇ ಸೆಮಿಸ್ಟರ್ ಓದುತ್ತಿದ್ದಾರೆ. ಆದಿತ್ಯ ಅವರು, ಸಂಕ್ರಾಂತಿ ಅಂಗವಾಗಿ 2020ರ ಜನವರಿ 14ರಂದು ಕುಟುಂಬದೊಂದಿಗೆ ಶಿರಸಿ ಬಳಿಯ ಮೋರೆಗಾರ ಜಲಪಾತಕ್ಕೆ ಪ್ರವಾಸ ಹೋಗಿದ್ದಾಗ, ಮೂವರನ್ನು ರಕ್ಷಿಸಿದ್ದರು.

ಆದಿತ್ಯ ಅವರು ಜ. 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು