ಧಾರವಾಡ: ‘ಗಾಂಧೀಜಿ ಅವರ ಸ್ವರಾಜ್ಯ ಕನಸು ನನಸು ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗ್ರಾಮೀಣ ಅಭಿವೃದ್ಧಿಗೆ ಬಿಡುಗಡೆಯಾಗುವ ಅನುದಾನದ ಪ್ರತಿ ಪೈಸೆಯು ಸದುಪಯೋಗವಾಗಬೇಕು’ ಎಂದು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ವಿಭಾಗಮಟ್ಟದ 2026-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಗ್ರಾಮೀಣ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡಬಾರದು. ಎಲ್ಲರನ್ನು ಸಮನಾಗಿ ಕಾಣಬೇಕು. ಆಗ ಮಾತ್ರ ಅಭಿವೃದ್ಧಿಗೆ ವೇಗ ಮತ್ತು ಸ್ಪಂದನೆ ಸಿಗುತ್ತದೆ. ‘ನಮ್ಮ ಅಭಿವೃದ್ಧಿ ನಮ್ಮ ಸಹಭಾಗಿತ್ವದಲ್ಲಿ’ ಎಂಬ ನಂಬಿಕೆ ಜನಸಾಮಾನ್ಯರಲ್ಲಿ ಮೂಡಬೇಕು. ಇದಕ್ಕಾಗಿ ಯೋಜನೆಗಳ ವಿಕೇಂದ್ರಿಕರಣ, ಅಧಿಕಾರದ ವಿಕೇಂದ್ರಿಕರಣವಾಗಬೇಕು’ ಎಂದರು.

‘ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ಧಿ ಯೋಜನೆ ಯಶಸ್ವಿಯಾಗುತ್ತದೆ. ಜನರ ಬೇಡಿಕೆಗಳನ್ನು ಗ್ರಾಮ ಸಭೆಗಳ ಮೂಲಕ ಸಂಗ್ರಹಿಸಿ, ಯೋಜನೆಗಳನ್ನು ರೂಪಿಸಬೇಕು. ಜಿಲ್ಲಾ ವಾರ್ಷಿಕ ಅಭಿವೃದ್ಧಿ ಯೋಜನೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಪ್ರತೀಕವಾಗಿರಬೇಕು. ಎಲ್ಲ ವರ್ಗದ ಜನರ, ಸಮುದಾಯಗಳ ಬೇಡಿಕೆಗಳನ್ನು ಗ್ರಾಮಮಟ್ಟದಲ್ಲಿ ಚರ್ಚಿಸಿ, ಸೇರ್ಪಡೆಗೊಳಿಸಬೇಕು’ ಎಂದರು.

‘ಯೋಜನೆಗಳು ಅಧಿಕಾರಿಗಳ ಹಂತದಲ್ಲಿ ರೂಪಿತವಾಗಬಾರದು. ಸಾರ್ವಜನಿಕರ ಸಹಭಾಗಿತ್ವದಲ್ಲಿ ಯೋಜನೆಗಳು ರಚನೆ ಆಗಬೇಕು. ಜನರ ಬೇಡಿಕೆಗಳಿಗೆ ಸ್ಪಂದಿಸುವ ಯೋಜನೆಗಳು ದೀರ್ಘಕಾಲಿಕ ಬಾಳಿಕೆ ಬರುತ್ತವೆ’ ಎಂದು ಹೇಳಿದರು.

ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ.ಕೆ.ಎಂ. ಮಾತನಾಡಿ, ‘ಗ್ರಾಮ ಸ್ವರಾಜ್ಯ ಪಾರದರ್ಶಕವಾಗಿಯಾಗಬೇಕು. ಯೋಜನಾಭಿವೃದ್ಧಿಯು ಕ್ಷೇತ್ರಮಟ್ಟದಲ್ಲಿ ಜಾರಿ ಆಗಬೇಕು. ಯೋಜನಾ ಅನುಷ್ಠಾನದಲ್ಲಿ ಲಭ್ಯ ತಾಂತ್ರಿಕತೆಯನ್ನು ಬಳಸಿಕೊಂಡು, ಜನರ ಬೇಡಿಕೆಗಳಿಗೆ ಅನುಗುಣವಾಗಿ ಅಭಿವೃದ್ಧಿಯ ಕರಡು ರೂಪಿಸಬೇಕು’ ಎಂದು ಸಲಹೆ ನೀಡಿದರು.

‘ಬೆಳಗಾವಿ ವಿಭಾಗದ ಪ್ರತಿ ಗ್ರಾಮ ಮತ್ತು ನಗರಗಳಲ್ಲಿ ಜನವರಿ ತಿಂಗಳ 4ನೇ ಭಾನುವಾರ ಸ್ವಚ್ಛತಾ ವಾರ ಆಚರಿಸಬೇಕು. ಈ ಪರಂಪರೆಯನ್ನು ಪ್ರತಿ ತಿಂಗಳೂ ಎಲ್ಲ ಜಿಲ್ಲೆಗಳ ಅಧಿಕಾರಿಗಳು ಸಮುದಾಯದ ಸಹಭಾಗಿತ್ವದಲ್ಲಿ ಗ್ರಾಮ ಮತ್ತು ನಗರಗಳ ಸ್ವಚ್ಛತೆ ಮಾಡಬೇಕು. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶಗಳಿಂದ ಕ್ರಿಯಾಯೋಜನೆ ಸಿದ್ದಪಡಿಸಿಕೊಳ್ಳಬೇಕು’ ಎಂದರು.

ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ, ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮಿ ಪ್ರಿಯಾ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಕರ್ನಾಟಕ ಬಾಲ ವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಧಾರವಾಡ ಸಿಇಒ ಭುವನೇಶ ಪಾಟೀಲ, ಬೆಳಗಾವಿ ಸಿಇಒ ರಾಹುಲ್ ಶಿಂಧೆ, ಉತ್ತರಕನ್ನಡ ಸಿಇಒ ದೀಲಿಶ್ ಸಶಿ ಉಪಸ್ಥಿತರಿದ್ದರು.

‘ಜನಪ್ರತಿನಿಧಿಗಳ ಜೊತೆ ಕೈ ಜೋಡಿಸಿ’

ಸ್ಥಳೀಯ ಸಂಸ್ಥೆಗಳಿಗೆ ಕಾಯಕಲ್ಪ ನೀಡಲು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಶಾಸಕರೊಂದಿಗೆ ಜನಪ್ರತಿನಿಧಿಗಳೊಂದಿಗೆ ಅಧಿಕಾರಿಗಳು ಕೈ ಜೋಡಿಸಬೇಕು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇದರ ಪರಿಣಾಮಕಾರಿ ಬಳಕೆ ಆಗಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.