ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ | ಈದ್ಗಾ ಮೈದಾನದ ಗಣೇಶ ಮೂರ್ತಿ ವಿಸರ್ಜನೆ

Published 21 ಸೆಪ್ಟೆಂಬರ್ 2023, 10:58 IST
Last Updated 21 ಸೆಪ್ಟೆಂಬರ್ 2023, 10:58 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ ವೃತ್ತ ಸಮೀಪದ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮ ಗುರುವಾರ ಅದ್ದೂರಿಯಿಂದ ನೆರವೇರಿತು.

ಬೆಳಿಗ್ಗೆ 10 ಗಂಟೆಯಿಂದಲೇ ಬಿಜೆಪಿ ಶಾಸಕರು, ಕಾರ್ಯಕರ್ತರು, ಹಿಂದೂ ಸಂಘಟನೆಗಳ ಪ್ರಮುಖರು, ಗಜಾನನ ಮಂಡಳಿ ಪದಾಧಿಕಾರಿಗಳು ಮತ್ತು ವಿವಿಧ ಸಂಘಸಂಸ್ಥೆಗಳ ಪ್ರಮುಖರು ಮೈದಾನದಲ್ಲಿ ಸೇರತೊಡಗಿದರು.11.30ರವರೆಗೆ ವಿವಿಧ ಪೂಜೆ ಮತ್ತು ಇನ್ನಿತರ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ‘ನಾವು ಪ್ರತಿ ವರ್ಷ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುತ್ತೇವೆ. ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದರು.

ಶ್ರೀರಾಮಸೇನೆ ಸಂಘಟನೆಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಮಾತನಾಡಿ, ‘ಯಾರು ಎಷ್ಟೇ ಅಡ್ಡಿಪಡಿಸಿದರೂ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಂದ ಹಿಂಜರಿಯುವುದಿಲ್ಲ. ಮುಂದಿನ ವರ್ಷಗಳಲ್ಲಿ ಇನ್ನಷ್ಟು ಅದ್ಧೂರಿಯಾಗಿ ಗಣೇಶೋತ್ಸವ ಆಚರಿಸುತ್ತೇವೆ’ ಎಂದರು.

ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮತ್ತು ಪ್ರಮುಖರು ಇದ್ದರು.

ನಂತರ 11.45ರ ಸುಮಾರಿಗೆ ಅಬ್ಬರದ ಡಿಜೆ ಗಾಯನದೊಂದಿಗೆ ಮೆರವಣಿಗೆ ಆರಂಭವಾಯಿತು. ರಾಣಿ ಚನ್ನಮ್ಮ ವೃತ್ತದ ಸುತ್ತಲೂ ಭಾರಿ ಸಂಖ್ಯೆಯಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಕೇಸರಿ ಧ್ವಜಗಳನ್ನು ಹಿಡಿದುಕೊಂಡು ತುಂಬಾ ಹೊತ್ತು ಗೀತೆಗಳಿಗೆ ಕುಣಿದಾಡಿದರು. ಘೋಷಣೆ ಕೂಗಿದರು.

ಮೆರವಣಿಗೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಆಗದಿರಲಿಯೆಂದು ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು.

‘ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದು ಮೆರವಣಿಗೆ ಅದ್ಧೂರಿಯಾಗಿ ನಡೆದಿದೆ. ಸಂಜೆ 5ರ ಸುಮಾರಿಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿನ ಬಾವಿಯಲ್ಲಿ ಗಣೇಶನ ಮೂರ್ತಿ ವಿಸರ್ಜನೆಯಾಗಲಿದೆ’ ಎಂದು ಮೆರವಣಿಗೆ ಆಯೋಜಕರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT