ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಮೂಹಿಕ ಅತ್ಯಾಚಾರ; ರಾಜ್ಯ ಸರ್ಕಾರ ಮೌನ: ಜೋಶಿ ಕಿಡಿ

Published : 18 ಆಗಸ್ಟ್ 2024, 15:34 IST
Last Updated : 18 ಆಗಸ್ಟ್ 2024, 15:34 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ‘ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಅಮಾನವೀಯ ಮತ್ತು ರಾಜ್ಯವೇ ತಲೆ ತಗ್ಗಿಸುವ ಘಟನೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಷಾದ ವ್ಯಕ್ತಪಡಿಸಿದರು.

ಈ ಕುರಿತು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಅವರು, ‘ಆಟೊದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಕುರಿತು ಸರ್ಕಾರ ಮೌನ ತೋರಿರುವುದು ಅನುಮಾನ ಮೂಡಿಸುವಂತಿದೆ’ ಎಂದು ದೂರಿದ್ದಾರೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರಕ್ಕೆ ಜನರ ಕ್ಷೇಮಕ್ಕಿಂತ ಅವರ ರಾಜಕೀಯ ಸ್ವಾರ್ಥವೇ ಹೆಚ್ಚಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಯುವತಿಯ ರಕ್ಷಣೆಗೆ ಮುಂದಾಗಬೇಕು ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು‘ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT