ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ತೀವ್ರ ಗಾಯಗೊಂಡು ಇಲ್ಲಿನ ಕೆಎಂಸಿ–ಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳಲ್ಲಿ ಶುಕ್ರವಾರ ಇನ್ನಿಬ್ಬರು ಮೃತಪಟ್ಟಿದ್ದಾರೆ. ಈವರೆಗೆ ನಾಲ್ವರು ಸಾವನ್ನಪ್ಪಿದ್ದಾರೆ.

‘ಸುಭಾನಿನಗರದ ರಾಜು ಮುಗೇರಿ (16) ಮತ್ತು ಸಾಯಿನಗರದ ಲಿಂಗರಾಜ ಬಿನನೂರ(19) ಮೃತರು. ಆಸ್ಪತ್ರೆಯಲ್ಲಿ ಸದ್ಯಕ್ಕೆ ವಿನಾಯಕ (12) ಚೇತರಿಸಿಕೊಳ್ಳುತ್ತಿದ್ದು, ಇನ್ನೂ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರಿಗೂ ಅಗತ್ಯ ಚಿಕಿತ್ಸೆ ಮುಂದುವರಿದಿದೆ’ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಎಸ್.ಎಫ್.ಕಮ್ಮಾರ್ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ‘ಕುಟುಂಬದವರಿಗೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅವರಿಗೆ ಇನ್ನೂ ಹೆಚ್ಚಿನ ನೆರವು ನೀಡಲು ಪ್ರಯತ್ನಿಸಲಾಗುವುದು’ ಎಂದು ಸಂತೋಷ ಲಾಡ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.