ಬುಧವಾರ, ಮೇ 18, 2022
23 °C

ಮಕ್ಕಳ ಕವನ ಸ್ಪರ್ಧೆ: ಅಮ್ಮಿನಬಾವಿ ಮೂವರು ವಿದ್ಯಾರ್ಥಿನಿಯರಿಗೆ ಬಹುಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಧಾರವಾಡ: ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕವು ಹಮ್ಮಿಕೊಂಡಿದ್ದ ಮಕ್ಕಳ ಕವನ ವಾಚನ ಸ್ಪರ್ಧೆಯಲ್ಲಿ, ತಾಲ್ಲೂಕಿನ ಅಮ್ಮಿನಬಾವಿ ಗ್ರಾಮದ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಕನ್ನಡ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿನಿಯರಿಗೆ ಬಹುಮಾನ ಲಭಿಸಿದೆ.

ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಾದ ಶ್ರುತಿ ಬೂದಿಹಾಳ ಹಾಗೂ ರಕ್ಷಿತಾ ಧನಶೆಟ್ಟಿ ಕಿರಿಯ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದರೆ, ಹಿರಿಯರ ವಿಭಾಗದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಶಿಲ್ಪಾ ಶಿರೆಣ್ಣಿಗೆ ಸಮಾಧಾನಕರ ಬಹುಮಾನ ಲಭಿಸಿದೆ. ಶಾಲೆಯ ಅಧ್ಯಾಪಕಿ ಶೋಭಾ ಉಪ್ಪಾರ ಈ ವಿದ್ಯಾರ್ಥಿನಿಯರ ಕವನ ರಚನೆಗೆ ಮಾರ್ಗದರ್ಶನ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು