ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಕೆ. ಗೋವಿಂದರಾವ್‌ ಸಾಂಸ್ಕೃತಿಕ ಚಿಂತಕ: ಹುಬ್ಬಳ್ಳಿಯಲ್ಲಿ ನುಡಿನಮನ

ನುಡಿನಮನ ಕಾರ್ಯಕ್ರಮದಲ್ಲಿ ಸಾಹಿತಿ ಶ್ಯಾಮಸುಂದರ ಬಿದರಕುಂದಿ
Last Updated 18 ಅಕ್ಟೋಬರ್ 2021, 14:54 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಮೂಲತಃ ಇಂಗ್ಲಿಷ್‌ ಪ್ರಾಧ್ಯಾಪಕರಾಗಿದ್ದ ಜಿ.ಕೆ. ಗೋವಿಂದರಾವ್‌ ಕನ್ನಡದ ಮೇಲೆ ಅಪಾರ ಹಿಡಿತ ಹೊಂದಿದ್ದರು. ಕನ್ನಡದಲ್ಲಿ ಹಲವು ಕೃತಿಗಳನ್ನು ರಚಿಸಿದ್ದ ಅವರದ್ದು ಬಹುಮಖ ಪ್ರತಿಭೆ. ಸಾಹಿತ್ಯದ ಜೊತೆಗೆ ನಾಟಕರಂಗದಲ್ಲೂ ಸಕ್ರಿಯರಾಗಿದ್ದರು. ಅವರು ಈ ನಾಡಿನ ಸಾಂಸ್ಕೃತಿಕ ಚಿಂತಕರಾಗಿದ್ದರು ಎಂದು ಸಾಹಿತಿ ಡಾ. ಶ್ಯಾಮಸುಂದರ ಬಿದರಕುಂದಿ ಹೇಳಿದರು.

ನಗರದ ಎಸ್‌ಜೆಎಂವಿಎಸ್‌ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯ, ಕನ್ನಡ ವಿಭಾಗ ಹಾಗೂ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕಾಲೇಜು ಶಿಕ್ಷಕರ ಸಂಘ ಜಂಟಿಯಾಗಿ ಆಯೋಜಿಸಿದ್ದ ಪ್ರೊ. ಜಿ.ಕೆ.ಗೋವಿಂದರಾವ್‌ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಗೋವಿಂದರಾವ್‌ ಅವರ ಸಾಹಿತ್ಯ ಕೃಷಿ ಅಪಾರವಾದದ್ದು, ಈಶ್ವರಅಲ್ಲಾ ಎಂಬ ಕಿರು ಕಾದಂಬರಿ ಸೇರಿದಂತೆ ಅನೇಕ ಮೌಲಿಕ ಕೃತಿಗಳನ್ನು ಜಗತ್ತಿಗೆ ನೀಡಿದ್ದಾರೆ. ಪ್ರಗತಿಪರ ಆಲೋಚನೆಗಳನ್ನು ಹೊಂದಿ ಆ ಮೂಲಕ ಇಡೀ ತಮ್ಮ ಜೀವನವನ್ನು ಸಮಾಜದ ಏಳಿಗೆಗಾಗಿ ಮೀಸಲಿಟ್ಟಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಸೇರಿದಂತೆ ಹಲವಾರು ಧಾರವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸುವ ಮೂಲಕ ನಾಡಿಗೆ ಚಿರಪರಿಚಿತರಾಗಿದ್ದರು’ ಎಂದು ಹೇಳಿದರು.

ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಿ.ಎಸ್.ನವಲಗುಂದ, ಡಾ. ಸುಪ್ರಿಯಾ ಮಲಶೆಟ್ಟಿ, ಪ್ರೊ. ಶಿವಕುಮಾರ ಬನ್ನಿಹಟ್ಟಿ, ಪ್ರೊ. ಅಣ್ಣಪ್ಪ ಕೊರವರ, ಪ್ರೊ. ಶಿವಕುಮಾರ ಪ್ರಭಯ್ಯನವರಮಠ, ಶ್ವೇತಾ ಬಡಿಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT