ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ | ಕ.ವಿ.ವಿ: ಡಿ.ಕೆ.ಶಿವಕುಮಾರ ಚಿನ್ನದ ಪದಕ ಸ್ಥಾಪನೆ

Published 29 ಅಕ್ಟೋಬರ್ 2023, 16:59 IST
Last Updated 29 ಅಕ್ಟೋಬರ್ 2023, 16:59 IST
ಅಕ್ಷರ ಗಾತ್ರ

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಕೋರ್ಸ್‌ನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೆಸರಿನಲ್ಲಿ ಚಿನ್ನದ ಪದಕ ಪ್ರದಾನ ಮಾಡಲು ವಿಶ್ವವಿದ್ಯಾಲಯ ಒಪ್ಪಿದೆ ಎಂದು ಕೆಪಿಸಿಸಿ ಸದಸ್ಯ ರಾಬರ್ಟ್‌ ದದ್ದಾಪುರಿ ತಿಳಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಹೆಚ್ಚು ಅಂಕ (ಶೇ 77.1 ) ಗಳಿಸಿರುವ ದಾದಾಗೌಡ ಪಾಟೀಲ ಅವರು ಈ ವರ್ಷದ ಘಟಿಕೋತ್ಸವದಲ್ಲಿ ಪದಕ ಪಡೆಯುವರು. ಪ್ರತಿವರ್ಷ ಪದಕ ಪ್ರದಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

‘ನಿಗಮ, ಮಂಡಳಿಗಳಿಗೆ ತಿಂಗಳ ಕೊನೆ ಅಥವಾ ದೀಪಾವಳಿ ನಂತರ ನೇಮಕ ಮಾಡುವ ಸಾಧ್ಯತೆ ಇದೆ. ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ ಎಂದು ಮನವಿ ಮಾಡಿದ್ಧೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT