ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಅಕ್ಕಿಪೇಟೆಯ ಗಣೇಶಗೌಡ ಮೆಣಸಗಿ ಅವರ ಮನೆ ಬಾಗಿಲಿನ ಬೀಗ ಮುರಿದು, ದೇವರ ಕೋಣೆಯಲ್ಲಿದ್ದ ₹70 ಸಾವಿರ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಕಳವು ಮಾಡಲಾಗಿದೆ. ಕಸಬಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಮು ಸೌಹಾರ್ದತೆಗೆ ಧಕ್ಕೆ; ಪ್ರಕರಣ ದಾಖಲು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಾಯಿ ದೇಹಕ್ಕೆ ಟಿಪ್ಪು ಸುಲ್ತಾನ್ ಮುಖ ಅಂಟಿಸಿ ಪೋಸ್ಟ್ ಮಾಡಿರುವ ವ್ಯಕ್ತಿ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಹಿಂದೂ ಸಾಮ್ರಾಜ್ಯ_63’ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಾಯಿ ದೇಹಕ್ಕೆ ಟಿಪ್ಪು ಮುಖವನ್ನು ಎಡಿಟ್ ಮಾಡಿ, ‘20 ನವೆಂಬರ್ ಹ್ಯಾಪಿ ಬರ್ಥಡೇ ಟಾಮಿ’ ಎಂದು ಬರೆದು ಪೋಸ್ಟ್ ಮಾಡಲಾಗಿದೆ. ಕೋಮು ಸೌಹಾರ್ದತೆ ಹಾಳು ಮಾಡಲು ಯತ್ನಿಸಲಾಗಿದೆ ಎಂದು ಆರೋಪಿಸಿ ಪಿಎಸ್‌ಐ ರಮೇಶ ಪಾಟೀಲ ದೂರು ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.