ಸೋಮವಾರ, ಆಗಸ್ಟ್ 15, 2022
22 °C

ಉತ್ತಮ ಮಳೆ: ತುಂಬಿದ ಡೌಗಿ ನಾಲಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಳ್ನಾವರ: ಮಂಗಳವಾರ ರಾತ್ರಿ ಆರಂಭವಾದ ಮಳೆ ಬುಧವಾರ ಬೆಳಗಿನ ಜಾವದವರೆಗೆ ಬಿಟ್ಟು ಬಿಡದೆ ಸುರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು.

ಪಟ್ಟಣ ಹಾಗೂ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಉತ್ತಮ ಮಳೆಯಾಗಿದೆ. ಗದ್ದೆಗಳಲ್ಲಿ ನೀರು ನಿಂತಿದೆ. ಭತ್ತ ಹಾಗೂ ಕಬ್ಬು ಬೆಳೆಗೆ ಮಳೆ ಸಹಕಾರಿಯಾಗಿದೆ. ಮಧ್ಯಾಹ್ನದವರೆಗೆ ಅಂಗಡಿಗಳ ಮಾಲೀಕರು ವಹಿವಾಟು ನಡೆಸಿದರು. 

ಸಭೆ: ಪಟ್ಟಣ ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ಹಾಗೂ ಅತಿವೃಷ್ಟಿ ಸಮಿತಿಯ ನೋಡಲ್ ಅಧಿಕಾರಿ ರುದ್ರೇಶ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕೋವಿಡ್ ಲಸಿಕೆ ಪಡೆಯಲು ಜನರಲ್ಲಿ ಜಾಗೃತಿ ಮೂಡಿಸಬೇಕು, ಪ್ರವಾಹ ಪರಿಸ್ಥಿತಿ ಉಂಟಾದರೆ ತುರ್ತು ಕಾರ್ಯಕ್ಕೆ ಸಜ್ಜಾಗಿರಬೇಕು ಎಂದು ಸೂಚಿಸಿದರು. ಕಳೆದ ವರ್ಷ ಉಂಟಾದ ಅತಿವೃಷ್ಟಿಗೆ ಸಿಲುಕಿದ ಬಡಾವಣೆಗಳನ್ನು ವೀಕ್ಷಿಸಿದ ಅವರು ಮುಂಜಾಗ್ರತಾ ಕ್ರಮ ಜರುಗಿಸಲು ಹೇಳಿದರು.

ತುಂಬಿರುವ ಕಾರಣ ಡೌಗಿ ನಾಲಾ ಬಾಂದಾರಾದ ಗೇಟ್‌ಗಳನ್ನು ತೆರೆದು ಹೆಚ್ಚುವರಿ ಹಳ್ಳದ ನೀರನ್ನು ಬಿಡಲಾಗುತ್ತಿದೆ. 

ತಹಶೀಲ್ದಾರ್ ಅಮರೇಶ ಪಮ್ಮಾರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಾಲ್ಲೂಕಿನ ಗ್ರಾಮ ಪಂಚಾಯ್ತಿ ಪಿಡಿಒಗಳು, ಗ್ರಾಮ ಲೆಕ್ಕಾಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.