ಹುಬ್ಬಳ್ಳಿ: 'ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದು, ಜಂಟಿ ಅಧಿವೇಶನದಲ್ಲಿ ಅವರು ನಡೆದುಕೊಂಡ ರೀತಿ ಸಂವಿಧಾನ ಬಾಹಿರವಾಗಿದೆ' ಎಂದು ಸರ್ಕಾರದ ಮುಖ್ಯ ಸಚೇತಕ, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ವಿಧಾನಸಭೆ, ವಿಧಾನಪರಿಷತ್ನ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಭಾಷಣ ಮಾಡುವುದು ಸಂಪ್ರದಾಯ. ಆದರೆ, ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ಅವರು ಅದೊಂದನ್ನು ಬಿಟ್ಟು ಉಳಿದ ಕೆಲಸ ಮಾಡಿದ್ದಾರೆ' ಎಂದು ಕಿಡಿಕಾರಿದರು.

'ರಾಜ್ಯಪಾಲರ ನಡೆಯಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ. ಇಲ್ಲಿ ಭಾವನೆಗಳಿಗೆ ಅವಕಾಶವಿಲ್ಲ, ಕರ್ತವ್ಯ ಮಾತ್ರ ನಿಭಾಯಿಸಬೇಕು. ಈಗಾಗಲೇ ನಮ್ಮ ಸರ್ಕಾರ ಅವರ ನಡೆ ಖಂಡಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ. ಇಂತಹ ಘಟನೆ ರಾಜ್ಯದಲ್ಲಿ ಹಿಂದೆಂದೂ ನಡೆದಿಲ್ಲ' ಎಂದರು.
.ರಾಜ್ಯ ಸರ್ಕಾರದಿಂದ ಲಿಕ್ಕರ್ ಗ್ಯಾರಂಟಿ ಯೋಜನೆ: ಶಾಸಕ ಟೆಂಗಿನಕಾಯಿ.ಹುಬ್ಬಳ್ಳಿ | ಮನೆ ಹಂಚಿಕೆ ಕಾರ್ಯಕ್ರಮ: ಕಟೌಟ್ ಬಿದ್ದು ಮೂವರು ಗಂಭೀರ ಗಾಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.