ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ, ಬೃಹತ್‌ ಕೈಗಾರಿಕೆ ಇಲಾಖೆಗಳ ವಿಲೀನ?

ಕೈಗಾರಿಕೆಗಳ ಅಭಿವೃದ್ಧಿಪಡಿಸುವ ಉದ್ದೇಶ
Last Updated 9 ಸೆಪ್ಟೆಂಬರ್ 2019, 20:15 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಕೈಗಾರಿಕೆಗಳ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದಲ್ಲಿರುವ ಸಣ್ಣ, ಮಧ್ಯಮ ಹಾಗೂ ಬೃಹತ್‌ ಕೈಗಾರಿಕೆಗಳ ಇಲಾಖೆಗಳನ್ನು ವಿಲೀನಗೊಳಿಸಿ ಒಂದೇ ಇಲಾಖೆ ಮಾಡುವ ಉದ್ದೇಶ ಇದೆ’ ಎಂದು ಬೃಹತ್‌ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

ಸೋಮವಾರ ನಗರದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮೀಣ ಕೈಗಾರಿಕಾ ಸಂಘಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಆಡಳಿತಾತ್ಮಕವಾಗಿ ಕೆಲವಷ್ಟು ಸುಧಾರಣೆಗಳಾಗಬೇಕಿದೆ. ಆ ನಿಟ್ಟಿನಲ್ಲಿ ಮೊದಲ ಪ್ರಯತ್ನವಾಗಿಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಡಿ ಪ್ರತ್ಯೇಕವಾಗಿ ಕಾರ್ಯ ನಿರ್ವಹಿಸುತ್ತಿರುವ ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳ ನಿರ್ದೇಶನಾಲಯಗಳನ್ನು ಒಗ್ಗೂಡಿಸಿ ಒಂದೇ ಇಲಾಖೆಯನ್ನಾಗಿ ಮಾಡುವ ಚಿಂತನೆ ಇದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

‘2014–19ರ ಕೈಗಾರಿಕಾ ನೀತಿ ಇದೇ ನವೆಂಬರ್‌ ತಿಂಗಳಿಗೆ ಕೊನೆಯಾಗಲಿದೆ. ಹೊಸ ಕೈಗಾರಿಕಾ ನೀತಿ ರೂಪಿಸಬೇಕಿರುವುದರಿಂದ, ಕೈಗಾರಿಕೋದ್ಯಮಿಗಳ ಜತೆ ಚರ್ಚಿಸಿ, ಮಾಹಿತಿ ಪಡೆಯುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT