ಮಂಗಳವಾರ, ನವೆಂಬರ್ 30, 2021
21 °C

ಕೋವಿಡ್‌ ಭೀತಿಯಿಂದ ಬರದ ವಿದ್ಯಾರ್ಥಿಗಳು; ಬಸವರಾಜ ಹೊರಟ್ಟಿ ಬೇಸರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಕೋವಿಡ್‌ ನಡುವೆ ರಾಜ್ಯ ಸರ್ಕಾರ ಎಲ್ಲ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಆದರೆ, ಶಿಕ್ಷಕರ ದಿನಾಚರಣೆಗೆ ಕೋವಿಡ್‌ ನೆಪವೊಡ್ಡಿ ನಿಬಂಧನೆಗಳನ್ನು ಹೇರಿದೆ ಎಂದು ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆ ಮತ್ತು ಲ್ಯಾಮಿಂಗ್ಟನ್‌ ಶಾಲೆಯ ಸಹಯೋಗದಲ್ಲಿ ಶನಿವಾರ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು ‘ಸರ್ಕಾರವೇ ಪ್ರತಿ ವರ್ಷ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ, ಜಿಲ್ಲಾ ಉಸ್ತುವಾರಿಗಳ ಸಮ್ಮುಖದಲ್ಲಿ ದೊಡ್ಡ ಮಟ್ಟದಲ್ಲಿ ಶಿಕ್ಷಕರ ದಿನದ ಕಾರ್ಯಕ್ರಮ ಆಯೋಜಿಸಬೇಕು’ ಎಂದರು.

‘ಶಿಕ್ಷಕರ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು; ಹೀಗಾದರೆ ಮಕ್ಕಳಿಂದ ಉತ್ತಮ ಫಲಿತಾಂಶ ನಿರೀಕ್ಷೆ ಮಾಡಲು ಹೇಗೆ ಸಾಧ್ಯ?. ಶಿಕ್ಷಣ ಸಚಿವರು ಈ ಬಗ್ಗೆ ಗಮನಹರಿಸಬೇಕು, ಖಾಲಿ ಉಳಿದ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.

ಶಾಲಾ ಸುಧಾರಣಾ ಸಮಿತಿ ಚೇರ್ಮನ್‌ ಆಗಿ ನೇಮಕವಾಗಿರುವ ಸುರೇಶ ಕಿಣಿ, ಶಿಕ್ಷಕರಾದ ಜಿ.ಬಿ. ಬೂದನೂರು ಮತ್ತು ಶಕುಂತಲಾ ಎಸ್‌. ಹೂಗಾರ ಅವರನ್ನು ಸನ್ಮಾನಿಸಲಾಯಿತು. ಲ್ಯಾಮಿಂಗ್ಟನ್‌ ಶಾಲೆಯ ಪ್ರಮುಖರಾದ ಶಶಿಧರ ಸಾಲಿ, ಎಂ.ಬಿ. ನಾತು, ಸಿ.ಜಿ. ಪಾಟೀಲ, ಎ.ಐ ಕಟಗೇರಿ ಪಾಲ್ಗೊಂಡಿದ್ದರು.

ಸಂಸ್ಕಾರ ಬೆಳೆಸಿ: ‘ಈಗಿನ ಮಕ್ಕಳಲ್ಲಿ ಪುಸ್ತಕದ ಜ್ಞಾನ ಹೆಚ್ಚುತ್ತಿದೆ. ಆದರೆ ಸಂಸ್ಕಾರ ಕಲಿಯುತ್ತಿಲ್ಲ. ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಬೇಕು’ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯ ಜಂಟಿ ಆಶ್ರಯದಲ್ಲಿ ನಗರದ ಘಂಟಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಸ್. ಶಿವಳ್ಳಿಮಠ, ಹುಬ್ಬಳ್ಳಿ ಶಹರ ಕರ್ನಾಟಕ ನೌಕರರ ಸಂಘದ ಅಧ್ಯಕ್ಷ ಪ್ರಲ್ಹಾದ ಗೆಜ್ಜಿ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಚ್. ಜಂಗಳಿ, ಪ್ರೌಢಶಾಲಾ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಯು.ಬುದ್ದಿ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ.ಮಳಗಿ, ಇಂಡಿಯನ್ ಬ್ಯಾಂಕ್ ವ್ಯವಸ್ಥಾಪಕ ಹರೀಶ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು