ಹುಬ್ಬಳ್ಳಿ: ‘ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಬದಲಾವಣೆಯಾಗಿದ್ದು, ಈಗ ಪದವೀಧರರು ಮತ ಚಲಾಯಿಸಬೇಕಾದರೆ ಕಡ್ಡಾಯವಾಗಿ ಹೆಸರು ನೋಂದಾಯಿಸಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಕಾರ್ಯ, ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಮುಂದಿನ ದಿನಗಳಲ್ಲಿ ದೇಶದಲ್ಲಿ ತಯಾರಿಸಿದ ವಸ್ತುಗಳನ್ನೆ ನಾವೆಲ್ಲ ಉಪಯೋಗಿಸಬೇಕು. ಒಂದು ವಿಧಾನಸಭಾ ಕ್ಷೇತ್ರದ ವತಿಯಿಂದ ಸ್ವದೇಶಿ ಮೇಳ ಆಯೋಜಿಸಬೇಕು. ಜಿಎಸ್ಟಿ ದರ ಪರಿಷ್ಕರಣೆಯಿಂದ ಬಡವರು, ಮಧ್ಯಮ ವರ್ಗದವರು ಸೇರಿ ಎಲ್ಲರಿಗೂ ಅನುಕೂಲವಾಗಿದೆ’ ಎಂದರು.

ಈ ಹಿಂದೆ ಶೇ 12ರ ತೆರಿಗೆ ವ್ಯಾಪ್ತಿಯಲ್ಲಿದ್ದ ಶೇ 99ರಷ್ಟು ಉತ್ಪನ್ನಗಳು ಈ ಶೇ 5ರ ತೆರಿಗೆ ವ್ಯಾಪ್ತಿಗೆ ಬರುತ್ತಿವೆ. ದವಸಧಾನ್ಯಗಳ ಮೇಲಿನ ತೆರಿಗೆಯನ್ನು ಶೂನ್ಯಕ್ಕೆ ಇಳಿಸಲಾಗಿದೆ. ಜಿಎಸ್ಟಿ ಪರಿಷ್ಕರಣೆಯ ಲಾಭದ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಹೇಳಿದರು.

ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಮಾತನಾಡಿದರು. ಮೇಯರ್ ಜ್ಯೋತಿ ಪಾಟೀಲ್, ಉಪಮೇಯರ್ ಸಂತೋಷ ಚವ್ಹಾಣ್, ಬಿಜೆಪಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಅಮೃತ ದೇಸಾಯಿ, ವಸಂತ ನಾಡಜೋಶಿ, ಶಿವು ಮೆಣಸಿನಕಾಯಿ, ಬಸವರಾಜ ಗರಗ, ಸತೀಶ ಶೇಜವಾಡಕರ, ಮಹೇಂದ್ರ ಕೌತಾಳ, ರಾಮಪ್ಪ ಬಡಿಗೇರ, ಈರೇಶ ಅಂಚಟಗೇರಿ, ಸಂಜಯ ಕಪಟಕರ, ಶಿವು ಹಿರೇಮಠ, ಕೃಷ್ಣಾ ಗಂಡಗಾಳೇಕರ, ಮಂಜುನಾಥ ಕಾಟಕರ, ಈಶ್ವರಗೌಡ ಪಾಟೀಲ್, ಮಂಜುನಾಥ ನೀರಲಕಟ್ಟಿ, ರಾಜು ಕೋರ್ಯಾಣಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.