ಶುಕ್ರವಾರ, ಮೇ 20, 2022
19 °C
ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ

ಬದಲಾವಣೆ ನಿರೀಕ್ಷೆಯಲ್ಲಿ ಪದವೀಧರರು: ವಿನಯ ಕುಲಕರ್ಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಬ್ಬಳ್ಳಿ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಈ ಬಾರಿ ಮತದಾರರು ಬದಲಾವಣೆ ಬಯಸಿದ್ದಾರೆ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಹೇಳಿದರು.

ಕಾರವಾರ ರಸ್ತೆಯಲ್ಲಿ ಭಾನುವಾರ ಕಾಂಗ್ರೆಸ್‌ ಪಕ್ಷದ ಜಿಲ್ಲಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು ‘ಪಶ್ಚಿಮ ಕ್ಷೇತ್ರ ಅನೇಕ ವರ್ಷಗಳ ಕಾಲ ಕಾಂಗ್ರೆಸ್‌ ಹಿಡಿತದಲ್ಲಿತ್ತು. ಕೆಲ ಕಾರಣಕ್ಕೆ ಅಧಿಕಾರ ನಮ್ಮ ಕೈ ತಪ್ಪಿದ್ದು, ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಕುಬೇರಪ್ಪ ಅವರು ಗೆಲುವು ಸಾಧಿಸಲಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ’ ಎಂದರು.

‘ಈ ಸಲದ ಚುನಾವಣೆ ಹಿಂದಿನ ಎಲ್ಲ ಚುನಾವಣೆಗಳಿಗಿಂತಲೂ ಭಿನ್ನವಾಗಿದೆ. ಕುಬೇರಪ್ಪ ಅವರು ಪದವೀಧರರ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಅವರನ್ನು ಆರಿಸಿ ತಂದು ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲ ಕಾರ್ಯಕರ್ತರು ಶ್ರಮಿಸಬೇಕು’ ಎಂದು ಕರೆ ನೀಡಿದರು.

ಕುಬೇರಪ್ಪ ಮಾತನಾಡಿ ‘ಶಿಕ್ಷಣ ಮತ್ತು ಪದವೀಧರ ಕ್ಷೇತ್ರದಲ್ಲಿ ಅನೇಕ ಸಮಸ್ಯೆಗಳಿದ್ದು ಅವುಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ನಿರುದ್ಯೋಗ ಭತ್ಯೆ ಕೊಡಿಸಲು ಹೋರಾಡುತ್ತೇನೆ’ ಎಂದರು.

ಶಾಸಕರಾದ ಕುಸುಮಾ ಶಿವಳ್ಳಿ, ಪ್ರಸಾದ ಅಬ್ಬಯ್ಯ, ಮಾಜಿ ಸಂಸದ ಐ.ಜಿ.ಸನದಿ, ಪಕ್ಷದ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್‌ ಹುಸೇನ ಹಳ್ಳೂರ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮುಖಂಡರಾದ ಎ.ಎಂ.ಹಿಂಡಸಗೇರಿ, ಸದಾನಂದ ಡಂಗನವರ, ದೀಪಾ ನಾಗರಾಜ ಗೌರಿ, ತಾರಾದೇವಿ ವಾಲಿ, ಶಾಕೀರ ಸನದಿ, ಅಲ್ತಾಫ್‌ ನವಾಜ್ ಕಿತ್ತೂರ, ದೇವಕಿ ಯೋಗಾನಂದ, ಬಸವರಾಜ ಮಲಕಾರಿ, ಬಸವರಾಜ ಕಿತ್ತೂರ, ಸತೀಶ ತುರಮೂರಿ, ವಿನೋದ ಅಸೂಟಿ, ಮಹೆಮೂದ್‌ ಕೊಳೂರ ಮತ್ತು ಸಾಗರ ಹಿರೇಮನಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು