ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯನಾಳ ಗ್ರಾ.ಪಂ ಸದಸ್ಯ ದೀಪಕ್ ಭೀಕರ ಹತ್ಯೆ: ತನಿಖೆ ಚುರುಕು

Last Updated 5 ಜುಲೈ 2022, 6:35 IST
ಅಕ್ಷರ ಗಾತ್ರ

ಹುಬ್ಬಳ್ಳಿ:ತಾಲ್ಲೂಕಿನ ರಾಯನಾಳ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರೌಡಿಶೀಟರ್ ದೀಪಕ ಶಿವಾಜಿ ಪಟದಾರಿ ‌(34) ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರಾಯನಾಳದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಬೈಕ್ ನಲ್ಲಿ ಮನೆಗೆ ಹೊರಟಿದ್ದ ವೇಳೆ ದೀಪಕ್ ಅವರನ್ನು ಅಡ್ಡಗಟ್ಟಿದ ಐದಕ್ಕೂ ಹೆಚ್ಚು ಜನರು ಇದ್ದ ದುಷ್ಕರ್ಮಿಗಳ ತಂಡ ಕಲ್ಲಿನಿಂದ ತಲೆ ಹಾಗೂ ಮುಖಕ್ಕೆ ಜಜ್ಜಿ ಕೊಲೆ ಮಾಡಿ, ಪರಾರಿಯಾಗಿದ್ದಾರೆ.

ಇತ್ತೀಚಿಗೆ ದೀಪಕ ಪ್ರೇಮ ವಿವಾಹ ಅಗಿದ್ದರು. ಜತೆಗೆ ಆಸ್ತಿ ವಿಚಾರವಾಗಿಯೂ ಕೊಲೆ‌ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಡಿಸಿಪಿ ಸಾಹಿಲ್‌ ಬಾಗ್ಲಾ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈಗಾಗಲೇ ಹಲವರನ್ನು ವಶಕ್ಕೆ ಪಡೆದು ವಿಚಾರಣೆ‌ ನಡೆಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT